ADVERTISEMENT

14 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2020, 20:08 IST
Last Updated 21 ಸೆಪ್ಟೆಂಬರ್ 2020, 20:08 IST
ಒಳಹರಿವು ಭಾರಿ ಹೆಚ್ಚಳವಾಗಿರುವುದರಿಂದ ಹೊಸಪೇಟೆ ಸಮೀಪದ‌ ತುಂಗಭದ್ರಾ ಜಲಾಶಯದಿಂದ ಸೋಮವಾರ ನದಿಗೆ‌ ನೀರು‌ ಹರಿಸಲಾಯಿತು
ಒಳಹರಿವು ಭಾರಿ ಹೆಚ್ಚಳವಾಗಿರುವುದರಿಂದ ಹೊಸಪೇಟೆ ಸಮೀಪದ‌ ತುಂಗಭದ್ರಾ ಜಲಾಶಯದಿಂದ ಸೋಮವಾರ ನದಿಗೆ‌ ನೀರು‌ ಹರಿಸಲಾಯಿತು   

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಬಿರುಸುಗೊಂಡಿರುವುದರಿಂದ ಕರಾವಳಿ ಹಾಗೂ ಒಳನಾಡಿನ ಜಿಲ್ಲೆಗಳಲ್ಲಿ ಸೆ.22ರಿಂದ 24ರವರೆಗೆ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಭಾಗದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮೂರು ದಿನ ಗಳಿಂದ ಹೆಚ್ಚು ಮಳೆಯಾಗುತ್ತಿದ್ದು, ಸೆ.22ರವರೆಗೆ ‘ರೆಡ್ ಅಲರ್ಟ್’ ಮುಂದುವರಿಸಲಾಗಿದೆ.

ಕರಾವಳಿಯಲ್ಲಿ ಗರಿಷ್ಠ 4 ಮೀಟರ್‌ಗಳಷ್ಟು ಎತ್ತರ ಅಲೆಗಳು ಏಳುತ್ತಿದ್ದು, ಗಂಟೆಗೆ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿರುವುದ ರಿಂದ ಮೀನುಗಾರರು ಮಂಗಳ ವಾರ (ಸೆ.22) ಸಮುದ್ರಕ್ಕೆ ಇಳಿ ಯಬಾರದು ಎಂದು ಇಲಾಖೆ ಎಚ್ಚರಿಸಿದೆ.

ADVERTISEMENT

ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು, ಯಾದಗಿರಿ, ರಾಯಚೂರು, ಕಲಬುರ್ಗಿ, ಹಾವೇರಿ, ಧಾರವಾಡ, ಬೀದರ್, ಬೆಳಗಾವಿ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇರುವುದರಿಂದ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ.

ಮಳೆ-ಎಲ್ಲಿ, ಎಷ್ಟು?: ಆಗುಂಬೆ ಯಲ್ಲಿ ಗರಿಷ್ಠ 27 ಸೆಂ.ಮೀ ಮಳೆ ಯಾಗಿದೆ. ಕೊಲ್ಲೂರು 24, ಅಂಕೋಲಾ 22, ಕಾರ್ಕಳ 14, ಹೊನ್ನಾವರ 12, ತೀರ್ಥಹಳ್ಳಿ 10, ಮೂಡುಬಿದರೆ, ಕುಂದಾಪುರ 9, ಸುಳ್ಯ, ಮಂಗಳೂರು ವಿಮಾನ ನಿಲ್ದಾಣ, ಕೊಪ್ಪ 8, ಪುತ್ತೂರು, ಉಡುಪಿ, ಬೀದರ್, ಮೂಡಿಗೆರೆ 7, ಕಾರವಾರ, ವಿರಾಜಪೇಟೆ 6, ಉಪ್ಪಿನಂಗಡಿ, ನರಗುಂದ, ಮುದ್ದೇಬಿಹಾಳ, ಸಕಲೇಶಪುರ 5, ಬೆಳ್ತಂಗಡಿ, ಬ್ರಹ್ಮಾವರ, ಮಧುಗಿರಿ 4, ಕಲಬುರ್ಗಿ 2, ಹಿರೇಕೆರೂರು, ಗೌರಿಬಿದನೂರು, ಚಿಕ್ಕಬಳ್ಳಾಪುರ, ಬೇಲೂರು, ನೆಲಮಂಗಲ, ದೇವನಹಳ್ಳಿ ಹಾಗೂ ಶಿಕಾರಿಪುರದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.