ಹುಬ್ಬಳ್ಳಿಯಿಂದ ಬ್ಯಾಹಟ್ಟಿಗೆ ಸಂಪರ್ಕ ಕಲ್ಪಿಸುವ ರಸ್ತೆ ಮಧ್ಯದಲ್ಲಿನ ಹಳ್ಳ ತುಂಬಿ ಹರಿಯುತ್ತಿದ್ದು, ಬುಧವಾರ ಬೈಕ್ ಸವಾರರೊಬ್ಬರು ಅದರಲ್ಲೇ ಸಾಗಿದರು
-ಪ್ರಜಾವಾಣಿ ಚಿತ್ರ: ಗೋವಿಂದರಾಜ ಜವಳಿ
ಹುಬ್ಬಳ್ಳಿ/ಕಲಬುರಗಿ: ರಾಜ್ಯದ ಹಲವೆಡೆ ಬುಧವಾರವೂ ಮಳೆ ಸುರಿದಿದೆ.ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ತಾಲ್ಲೂಕಿನ ಕಟಗೇರಿ ಗ್ರಾಮದಲ್ಲಿ ಮಂಗಳವಾರ ಸಂಜೆ ಸಿಡಿಲು ಬಡಿದು ಪಾರ್ವತೆವ್ವ ಹನಮಂತ ಅಪ್ಪನ್ನವರ (56) ಮೃತಪಟ್ಟಿದ್ದಾರೆ.
ಬೆಳಗಾವಿ ಜಿಲ್ಲೆಯ ಗೋಕಾಕದಲ್ಲಿ ಮಂಗಳವಾರ ಚರಂಡಿಯಲ್ಲಿ ಮಳೆ ನೀರಿನೊಂದಿಗೆ ಕೊಚ್ಚಿಹೋಗಿದ್ದ ಕಾಟೆಪ್ಪ ದುರಗಪ್ಪ ಶಿರಹಟ್ಟಿ (52) ಎಂಬುವರ ಶವ ಬುಧವಾರ ಪತ್ತೆಯಾದೆ. ಚರಂಡಿ ದಾಟುವ ವೇಳೆ ಅವರು ಆಯ ತಪ್ಪಿ ಬಿದ್ದಿದ್ದರು.
ಗದಗ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ, ಕಲಬುರಗಿ ನಗರ ಹಾಗೂ ಬೀದರ್ ಜಿಲ್ಲೆಯ ವಿವಿಧೆಡೆ ಬಿರುಸಿನ ಮಳೆಯಾಗಿದೆ.
ಬಾಗೇಪಲ್ಲಿ ವರದಿ: ಪಟ್ಟಣದಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆ ಸುರಿಯಿತು. ಹೊಲ–ಗದ್ದೆಗಳಲ್ಲಿ ನೀರು ಸಂಗ್ರಹವಾಗಿ ಭತ್ತ, ಜೋಳ, ಹೂವು ಬೆಳೆ ನೆಲ ಕಚ್ಚಿದೆ. ಕುರಿ, ಮೇಕೆ, ಎತ್ತು, ಹಂದಿ ಶೆಡ್‌ಗಳಿಗೆ ಮಳೆ ನೀರು ನುಗ್ಗಿದೆ.
ರಾಮನಗರ ವರದಿ: ರಾಮನಗರ ಜಿಲ್ಲೆಯಾದ್ಯಂತ ಉತ್ತಮ ಮಳೆ ಸುರಿಯಿತು.
ಹುಬ್ಬಳ್ಳಿಯಿಂದ ಬ್ಯಾಹಟ್ಟಿಗೆ ಸಂಪರ್ಕ ಕಲ್ಪಿಸುವ ರಸ್ತೆ ಮಧ್ಯದಲ್ಲಿನ ಹಳ್ಳ ತುಂಬಿ ಹರಿಯುತ್ತಿದ್ದು, ಬುಧವಾರ ವಾಹನಗಳು ಅದರಲ್ಲೇ ಸಾಗಿದವು.
ತಂಬಾಕು ಬೆಳೆಗಾರರಲ್ಲಿ ಸಂತಸ
ಮೈಸೂರು: ಹಾಸನ, ಕೊಡಗು, ಚಾಮರಾಜನಗರ ಜಿಲ್ಲೆಯ ವಿವಿಧೆಡೆ ಹಾಗೂ ಮೈಸೂರಿನಲ್ಲಿ ಬುಧವಾರ ಸಂಜೆ ಬಿರುಸಿನ ಮಳೆ ಸುರಿದಿದ್ದು, ತಂಬಾಕು, ಜೋಳ ಬೆಳೆಗಾರರ ಮುಖದಲ್ಲಿ ಹರ್ಷ ಮೂಡಿದೆ.
ಮೈಸೂರು ಸೇರಿದಂತೆ ಜಿಲ್ಲೆಯ ಹಲವೆಡೆ ಗುಡುಗು, ಸಿಡಿಲು ಸಹಿತ ಮಳೆಯಾಯಿತು. ಹಾಸನ ಜಿಲ್ಲೆಯ ಅರಕಲಗೂಡು ಹಾಗೂ ಸುತ್ತಮುತ್ತ ಸುಮಾರು ಅರ್ಧಗಂಟೆ ಮಳೆ ಸುರಿಯಿತು.
ಕೊಡಗು ಜಿಲ್ಲೆಯಲ್ಲೂ ಉತ್ತಮ ಮಳೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.