ADVERTISEMENT

Karnataka Rains | ಧಾರವಾಡ, ಕೊಡಗಿನಲ್ಲಿ ಮಳೆ

​ಪ್ರಜಾವಾಣಿ ವಾರ್ತೆ
Published 9 ಏಪ್ರಿಲ್ 2025, 0:20 IST
Last Updated 9 ಏಪ್ರಿಲ್ 2025, 0:20 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ನಾಪೋಕ್ಲು(ಕೊಡಗು ಜಿಲ್ಲೆ): ನಾಪೋಕ್ಲು ವ್ಯಾಪ್ತಿಯಲ್ಲಿ ಹಾಗೂ ಕುಶಾಲನಗರ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಮಂಗಳವಾರ ಮಧ್ಯಾಹ್ನ ಗುಡುಗು ಸಹಿತ ಬಿರುಸಿನ ಮಳೆಯಾಗಿದ್ದು, ಮರಗಳು ಬಿದ್ದು ಹಾನಿಯಾಗಿದೆ. 

ಸಮೀಪದ ಬೇತು, ಕೈಕಾಡು, ಪಾರಾಣೆ, ಕಕ್ಕಬ್ಬೆ, ಮರಂದೋಡ ಗ್ರಾಮಗಳಲ್ಲಿ ಮಧ್ಯಾಹ್ನ 2.45ರಿಂದ ಅರ್ಧಗಂಟೆಗೂ ಹೆಚ್ಚು ಕಾಲ ಮಳೆ ಸುರಿಯಿತು.

ADVERTISEMENT

ಮಡಿಕೇರಿಯ ಹಲವೆಡೆ ಹಾಗೂ ಮೈಸೂರಿನಲ್ಲಿ ಮಂಗಳವಾರ ಸಂಜೆ ಕೆಲಕಾಲ ತುಂತುರು ಮಳೆಯಾಯಿತು. ಉತ್ತರ ಕನ್ನಡ ಜಿಲ್ಲೆಯ ವಿವಿಧೆಡೆ ಹಾಗೂ ಹುಬ್ಬಳ್ಳಿ–ಧಾರವಾಡದಲ್ಲಿ ಮಂಗಳವಾರ ಮಳೆಯಾಯಿತು.

ಧಾರವಾಡದ ಸುತ್ತಮುತ್ತ ಮಳೆಯಾಯಿತು. ಹುಬ್ಬಳ್ಳಿಯ ಬಹುತೇಕ ಕಡೆ ಅರ್ಧ ಗಂಟೆಗೂ ಹೆಚ್ಚು ಹೊತ್ತು ಮಳೆಯಾಯಿತು. ಉತ್ತರ ಕನ್ನಡ ಜಿಲ್ಲೆಯ ವಿವಿಧೆಡೆ ಗಾಳಿ ಸಹಿತ ಮಳೆಯಾ‌ಯಿತು. ಮುಂಡಗೋಡದಲ್ಲಿ ಸಂಜೆ ಆಲಿಕಲ್ಲು ಸಹಿತ ಮಳೆ ಸುರಿಯಿತು. ಸಾಲಗಾಂವ ಬಳಿ ಹುಬ್ಬಳ್ಳಿ-ಶಿರಸಿ ರಾಜ್ಯ ಹೆದ್ದಾರಿ ಮೇಲೆ ಮರ ಬಿದ್ದು, ಅರ್ಧ ಗಂಟೆ ವಾಹನಗಳ ಸಂಚಾರ ಸ್ಥಗಿತಗೊಂಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.