ಫೆಂಜಲ್ ಚಂಡಮಾರುತದ ಪರಿಣಾಮ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ರಸ್ತೆಗಳು ಜಲಾವೃತಗೊಂಡಿವೆ. ಇದರಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ.
ಪ್ರಜಾವಾಣಿ ಚಿತ್ರ
ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಉಡುಪಿಯ ರಸ್ತೆಗಳು ಜಲಾವೃತಗೊಂಡಿದ್ದು, ವಾಹನ ಸವಾರರಿಗೆ ತೊಂದರೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಕೆಂಜಾರಿನಿಂದ ಅದ್ಯಪಾಡಿ ಹೋಗುವ ರಸ್ತೆಯಲ್ಲಿ ಸಂಕೇಶ ಸಮೀಪ ಗುಡ್ಡ ಕುಸಿದಿದೆ.
ಮಳೆಯ ನಡುವೆಯೇ ಶಾಲೆಗೆ ತೆರಳುತ್ತಿರುವ ವಿದ್ಯಾರ್ಥಿಗಳು
ಬೀದರ್ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯ ದೃಶ್ಯ
ಫೆಂಜಲ್ ಚಂಡಮಾರುತದ ಪ್ರಭಾವದಿಂದ ವಿಜಯನಗರ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಸೋಮವಾರ ರಾತ್ರಿ ಇಡೀ ಜಿಟಿ ಜಿಟಿ ಮಳೆಯಾಗಿದೆ.
ಹೊಸಪೇಟೆಯಲ್ಲಿ ಇಂದು (ಮಂಗಳವಾರ) ಮುಂಜಾನೆ ಸುರಿಯುತ್ತಿರುವ ಮಳೆಯ ದೃಶ್ಯ
ವಿಜಯಪುರ ಜಿಲ್ಲೆಯ ವಿವಿಧೆಡೆ ಮಳೆಯಾಗುತ್ತಿದೆ.
ಬೀದರ್ ನಗರ ಸೇರಿದಂತೆ ಜಿಲ್ಲೆಯ ಹಲವೆಡೆ ಸತತ ಸುರಿಯುತ್ತಿರುವ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.