ADVERTISEMENT

ಕಲಬುರಗಿ – ಬೀದರ್‌ ಜಿಲ್ಲೆಯ ವಿವಿಧೆಡೆ ಆಲಿಕಲ್ಲು ಸಹಿತ ಜೋರು ಮಳೆ

​ಪ್ರಜಾವಾಣಿ ವಾರ್ತೆ
Published 18 ಮಾರ್ಚ್ 2023, 10:14 IST
Last Updated 18 ಮಾರ್ಚ್ 2023, 10:14 IST
ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಚಿಮ್ಮನಚೋಡನಲ್ಲಿ ಗ್ರಾಮಸ್ಥರು ಸಂಗ್ರಹಿಸಿದ ಆಲಿಕಲ್ಲು
ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಚಿಮ್ಮನಚೋಡನಲ್ಲಿ ಗ್ರಾಮಸ್ಥರು ಸಂಗ್ರಹಿಸಿದ ಆಲಿಕಲ್ಲು   

ಕಲಬುರಗಿ: ಕಲಬುರಗಿ ಮತ್ತು ಬೀದರ್‌ ಜಿಲ್ಲೆಯ ವಿವಿಧೆಡೆ ಶನಿವಾರ ಆಲಿಕಲ್ಲು ಸಹಿತ ಮಳೆಯಾಗಿದೆ.

ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ನರನಾಳ, ನಾಗರಾಳ, ಚಿಮ್ಮನಚೋಡ, ಹಸರಗುಂಡಗಿ, ಗುರಂಪಳ್ಳಿ, ಸಾಲೇಬೀರನಹಳ್ಳಿ, ಮರಪಳ್ಳಿ, ಯಂಪಳ್ಳಿ , ತುಮಕುಂಟಾ, ಕೊಳ್ಳೂರ ಹಾಗೂ ಚಂದ್ರಂಪಳ್ಳಿ ಗ್ರಾಮಗಳಲ್ಲಿ ಆಲಿಕಲ್ಲು ಸಹಿತ ಮಳೆಯಾಗಿದೆ. ಆಳಂದ ಮತ್ತು ಸೇಡಂ ತಾಲ್ಲೂಕಿನ ವಿವಿಧೆಡೆ ಮಳೆಯಾಗಿದೆ.

ಶುಕ್ರವಾರ ಮಧ್ಯರಾತ್ರಿ ಕಲಬುರಗಿ ನಗರ ಸೇರಿ ಜಿಲ್ಲೆಯ ವಿವಿಧೆಡೆ ಆಲಿಕಲ್ಲು ಸಹಿತ ಮಳೆಯಾಯಿತು. ಶನಿವಾರ ಮಧ್ಯಾಹ್ನದಿಂದ ಕಲಬುರಗಿಯಲ್ಲಿ ಮೋಡ ಕವಿದ ವಾತಾವರಣವಿದೆ.

ಬೀದರ್ ಜಿಲ್ಲೆಯ ಹುಲಸೂರು, ಬಸವಕಲ್ಯಾಣದಲ್ಲಿ ಮಳೆಯಾಗಿದೆ.

ADVERTISEMENT

ಯಾದಗಿರಿ ನಗರ ಸೇರಿ ಜಿಲ್ಲೆಯ ಶಹಾಪುರ ತಾಲ್ಲೂಕಿನಲ್ಲಿ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.