ADVERTISEMENT

ಭಾರಿ ಮಳೆಗೆ ನಲುಗಿದ ಉಡುಪಿ: ಹಲವೆಡೆ ಭೂಕುಸಿತ, ರಸ್ತೆ ಸಂಚಾರ ಬಂದ್‌

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2020, 19:42 IST
Last Updated 20 ಸೆಪ್ಟೆಂಬರ್ 2020, 19:42 IST
ಉಡುಪಿಯ ಕೃಷ್ಣಮಠ ಜಲಾವೃತಗೊಂಡಿರುವ ದೃಶ್ಯ.  -ಪ್ರಜಾವಾಣಿ ಚಿತ್ರ: ಉಮೇಶ್ ಮಾರ್ಪಳ್ಳಿ
ಉಡುಪಿಯ ಕೃಷ್ಣಮಠ ಜಲಾವೃತಗೊಂಡಿರುವ ದೃಶ್ಯ. -ಪ್ರಜಾವಾಣಿ ಚಿತ್ರ: ಉಮೇಶ್ ಮಾರ್ಪಳ್ಳಿ   

ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಹಾಗೂ ಕೊಡಗು ಭಾಗದಲ್ಲಿ ಭಾನುವಾರ ಧಾರಾಕಾರ ಮಳೆ ಆಗಿದೆ. ಭಾರಿಮಳೆಗೆ ಉಡುಪಿ ನಗರ, ಜಿಲ್ಲೆಯ ಕೆಲ ಪ್ರದೇಶಗಳು ನಲುಗಿ ಹೋಗಿವೆ. ಹಲವೆಡೆ ಭೂಕುಸಿತದಿಂದ ರಸ್ತೆ ಸಂಚಾರ ಸ್ಥಗಿತಗೊಂಡಿದೆ.

ಉಡುಪಿ ನಗರ ದ್ವೀಪದಂತಾಗಿದ್ದು,ಹಲವು ಬಡಾವಣೆಗಳು ಭಾಗಶಃ ಮುಳುಗಡೆಯಾಗಿವೆ. ಬ್ರಹ್ಮಾವರ, ಕಾಪುತಾಲ್ಲೂಕುಗಳಲ್ಲೂ ಧಾರಾಕಾರ ಮಳೆಯಾಗಿದೆ. ದಕ್ಷಿಣ ಕನ್ನಡ, ಚಿಕ್ಕಮಗಳೂರು ಜಿಲ್ಲೆಯಲ್ಲೂ ಭಾರಿ ಮಳೆ ಸುರಿದಿದೆ. ಕೊಡಗು ಜಿಲ್ಲೆಯ ಭಾಗಮಂಡಲಮತ್ತೆ ಜಲಾವೃತಗೊಂಡಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಜೋರು ಮಳೆ ಆಗುತ್ತಿದೆ. ಉತ್ತರ ಕರ್ನಾಟಕ ಭಾಗದಲ್ಲೂ ಉತ್ತಮ ಮಳೆ ಆಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.