ಸಿದ್ದರಾಮಯ್ಯ (ಸಂಗ್ರಹ ಚಿತ್ರ)
ಬೆಂಗಳೂರು: ಮಳೆ ಹಾನಿ ಹಾಗೂ ಭೂ ಕುಸಿತದ ಪ್ರದೇಶಗಳಲ್ಲಿ ತಕ್ಷಣ ಪರಿಹಾರ ವಿತರಿಸಬೇಕು. ಶಾಶ್ವತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ.
ಅವಧಿಗೂ ಮೊದಲೇ ಮುಂಗಾರು ರಾಜ್ಯವನ್ನು ಪ್ರವೇಶಿಸಿ, ಬಿರುಗಾಳಿ, ಮಳೆ ಸುರಿದ ಪರಿಣಾಮ ಸಾರ್ವಜನಿಕರ ಆಸ್ತಿ, ಬೆಳೆ ನಷ್ಟವಾಗಿದೆ. ಮಲೆನಾಡಿನ ಹಲವೆಡೆ ಭೂಕುಸಿತವಾಗಿದೆ. ಭೂಕುಸಿತವಾದ ಹಾಸನ ಜಿಲ್ಲೆ ಸೇರಿದಂತೆ ಹಲವೆಡೆ ಪ್ರವಾಸ ಹಮ್ಮಿಕೊಂಡು ಜನರ ಸಮಸ್ಯೆ ಆಲಿಸಿರುವೆ. ಅನುದಾನ ಕೊರತೆಯ ನೆಪ ಹೇಳದೆ ತಕ್ಷಣ ಪರಿಹಾರ ಕಾರ್ಯ, ರಕ್ಷಣಾ ಕಾರ್ಯಾಚರಣೆ ಆರಂಭಿಸಬೇಕು ಎಂದು ಒತ್ತಾಯಿಸಿದ್ದಾರೆ.
ಮಳೆಯಿಂದ ಹಾನಿಗೊಳಗಾದ ರಸ್ತೆ, ಸೇತುವೆ ಸೇರಿದಂತೆ ಅಗತ್ಯ ಸೌಕರ್ಯಗಳನ್ನು ಪುನರ್ ಸ್ಥಾಪಿಸಬೇಕು. ಸ್ಥಳಾಂತರಗೊಂಡ ಕುಟುಂಬಗಳಿಗೆ ಆಹಾರ ಸೇರಿದಂತೆ ಅಗತ್ಯ ಸೌಕರ್ಯ ಕಲ್ಪಿಸಬೇಕು. ಮನೆ, ಜಾನುವಾರು ಕಳೆದುಕೊಂಡವರಿಗೆ ಪರಿಹಾರ ನೀಡಬೇಕು. ಪುನರ್ವಸತಿ ಕಲ್ಪಿಸಬೇಕು. ಭವಿಷ್ಯದಲ್ಲಿ ಅಪಾಯಗಳನ್ನು ತಡೆಗಟ್ಟಲು ಅಗತ್ಯವಾದ ದೀರ್ಘಾವಧಿ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು. ರೈತರ ನೆರವಿಗೆ ಧಾವಿಸಬೇಕು ಎಂದು ಆಗ್ರಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.