ADVERTISEMENT

Karnataka Rains: ಕರಾವಳಿಗೆ ಮುಂಗಾರಿನ ತಂಪು

​ಪ್ರಜಾವಾಣಿ ವಾರ್ತೆ
Published 10 ಜೂನ್ 2024, 20:02 IST
Last Updated 10 ಜೂನ್ 2024, 20:02 IST
   

ಮಂಗಳೂರು/ಮಡಿಕೇರಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಾದ್ಯಂತ ಮಳೆ ಮುಂದುವರಿದಿದ್ದು, ಕರಾವಳಿ ಪ್ರದೇಶವನ್ನು ತಂಪಾಗಿಸಿದೆ. ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಪ್ರದೇಶದಲ್ಲಿ ಅಬ್ಬರದ ಮಳೆಯಾಗಿದೆ.ಕೊಡಗು ಜಿಲ್ಲೆಯ ಕೆಲವೆಡೆ ಸೋಮವಾರ ಸಾಧಾರಣ ಮಳೆ ಮುಂದುವರಿದಿದೆ.

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸೋಮವಾರ ಬೆಳಗಿನ ಅವಧಿಯಲ್ಲಿ ಬಿರುಸಿನ ಮಳೆಯಾಗಿದ್ದು, ಮಧ್ಯಾಹ್ನದ ನಂತರ ಆಗಾಗ ತುಂತುರು ಮಳೆಯಾಗಿದೆ. 

ಸೋಮವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡ 24 ಗಂಟೆಗಳ ಅವಧಿಯಲ್ಲಿ ಉಡುಪಿ ಜಿಲ್ಲೆಯ ಕುಂದಾಪುರ ತ್ರಾಸಿಯಲ್ಲಿ 10 ಸೆಂ.ಮೀ, ಕಾರ್ಕಳ ಇನ್ನಾದಲ್ಲಿ 9.4 ಸೆಂ.ಮೀ, ಕಾಂತಾವರದಲ್ಲಿ 9.2 ಸೆಂ.ಮೀ, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತಿಗೆಯಲ್ಲಿ 8.5 ಸೆಂ.ಮೀ ದಾಖಲಾಗಿದೆ.  

ADVERTISEMENT

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳನ್ನೊಳಗೊಂಡಂತೆ ಕರಾವಳಿ ಜಿಲ್ಲೆಗಳಲ್ಲಿ ಮಂಗಳವಾರ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು, ಮೂಡಿಗೆರೆ, ಕಳಸ, ಶೃಂಗೇರಿ, ಎನ್.ಆರ್.ಪುರ ಭಾಗದಲ್ಲಿ ಉತ್ತಮ ಮಳೆಯಾಗಿದೆ. ಕೆರೆಕಟ್ಟೆಯಲ್ಲಿ 8 ಸೆಂ.ಮೀ ಮಳೆಯಾಗಿದೆ. ಕಡೂರು, ಬೀರೂರು, ತರೀಕೆರೆ, ಅಜ್ಜಂಪುರ ಭಾಗದಲ್ಲಿ ಮೋಡ ಕವಿದ ವಾತಾವರಣ ಇತ್ತು. ತುಂತುರು ಮಳೆಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.