ADVERTISEMENT

ಕೊಡಗು, ಚಿಕ್ಕಮಗಳೂರು ಸೇರಿ 7 ಜಿಲ್ಲೆಗಳಲ್ಲಿ ‘ರೆಡ್ ಅಲರ್ಟ್’ ಘೋಷಣೆ

​ಪ್ರಜಾವಾಣಿ ವಾರ್ತೆ
Published 9 ಜುಲೈ 2021, 20:38 IST
Last Updated 9 ಜುಲೈ 2021, 20:38 IST
ಮಳೆಯಲ್ಲೇ ಸಾಗುತ್ತಿರುವ ವಾಹನಗಳು -ಪ್ರಜಾವಾಣಿ ಚಿತ್ರ
ಮಳೆಯಲ್ಲೇ ಸಾಗುತ್ತಿರುವ ವಾಹನಗಳು -ಪ್ರಜಾವಾಣಿ ಚಿತ್ರ   

ಬೆಂಗಳೂರು: ‘ಮುಂಗಾರು ಬಿರುಸುಗೊಂಡಿರುವುದರಿಂದ ಕರಾವಳಿ ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿಜುಲೈ 11ರಿಂದ 13ರವರೆಗೆ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದೆ’ ಎಂದು ಹವಾಮಾನ ಇಲಾಖೆ ತಿಳಿಸಿದೆ.

‘ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಮೂರೂ ದಿನ ‘ರೆಡ್‌ ಅಲರ್ಟ್‌’ ಘೋಷಿಸಲಾಗಿದೆ’.

‘ಕರಾವಳಿ ಜಿಲ್ಲೆಗಳಲ್ಲಿ ಶನಿವಾರವೂ ಹೆಚ್ಚು ಮಳೆಯಾಗಲಿದೆ. ಈ ಭಾಗದಲ್ಲಿ ಗಂಟೆಗೆ ಗರಿಷ್ಠ 60 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು’ ಎಂದು ಎಚ್ಚರಿಸಿದೆ.

ADVERTISEMENT

‘ಯಾದಗಿರಿ, ವಿಜಯಪುರ, ಕಲಬುರ್ಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬಾಗಲಕೋಟೆ, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದಜು.10ರಿಂದ 13ರವರೆಗೆ ‘ಯೆಲ್ಲೊ ಅಲರ್ಟ್‌’ ನೀಡಲಾಗಿದೆ’.

‘ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಾತ್ರ ಹೆಚ್ಚು ಮಳೆಯಾಗಲಿದ್ದು, ಉಳಿದ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಚದುರಿದಂತೆ ಮಳೆಯಾಗಬಹುದು’ ಎಂದೂ ಮಾಹಿತಿ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.