ADVERTISEMENT

ಮಳೆಹಾನಿ: ಕೇಂದ್ರ ಅಧ್ಯಯನ ತಂಡದೊಂದಿಗೆ ಸಿಎಂ ಬೊಮ್ಮಾಯಿ ಸಭೆ 

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 7 ಸೆಪ್ಟೆಂಬರ್ 2022, 9:02 IST
Last Updated 7 ಸೆಪ್ಟೆಂಬರ್ 2022, 9:02 IST
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಅಧ್ಯಯನ ತಂಡದೊಂದಿಗೆ ಸಭೆ ನಡೆಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಅಧ್ಯಯನ ತಂಡದೊಂದಿಗೆ ಸಭೆ ನಡೆಸಿದರು.   

ಬೆಂಗಳೂರು: ಒಂದು ‌ವಾರದಿಂದ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಸುರಿದ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.

ತಗ್ಗು ಪ್ರದೇಶಗಳಲ್ಲಿ ಮನೆಗಳಿಗೆ ನೀರು ನುಗ್ಗಿದ್ದು, ಕೆಲವೆಡೆ ಸಾವು–ನೋವು ವರದಿಯಾಗಿದೆ.

ಈ ಬೆಳವಣಿಗೆಗಳ ನಡುವೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಜುಲೈ ಹಾಗೂ ಆಗಸ್ಟ್ ತಿಂಗಳಲ್ಲಿ ಸಂಭವಿಸಿದ ಮಳೆಹಾನಿ ಅಧ್ಯಯನ ಕುರಿತು ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ಗೃಹ ಸಚಿವಾಲಯದ ಜಂಟಿ ಕಾರ್ಯದರ್ಶಿ ಆಶಿಶ್ ಕುಮಾರ್ ನೇತೃತ್ವದ ತಂಡದೊಂದಿಗೆ ಸಭೆ ನಡೆಸಿದ್ದಾರೆ.

ADVERTISEMENT

ಈ ಕುರಿತು ‘ಕೂ’ ಮಾಡಿರುವ ಅವರು ಕೇಂದ್ರ ಅಧ್ಯಯನ ತಂಡದೊಂದಿಗೆ ನಡೆಸಿದ ಸಭೆ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ.

ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಕೃಷಿ ಸಚಿವ ಬಿ.ಸಿ. ಪಾಟೀಲ, ಗೃಹ ಸಚಿವ ಆರಗ ಜ್ಞಾನೇಂದ್ರ ಸೇರಿದಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್ ಹಾಗೂ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.