ADVERTISEMENT

ಇಂದು ಏಳು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ: ‘ಯೆಲ್ಲೊ ಅಲರ್ಟ್’ ಘೋಷಣೆ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2020, 19:30 IST
Last Updated 22 ಸೆಪ್ಟೆಂಬರ್ 2020, 19:30 IST
ಮಳೆ
ಮಳೆ   

ಬೆಂಗಳೂರು: ‘ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸೆ. 23ರಂದು ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮುಂಗಾರು ಚುರುಕಾಗಿರುವುದರಿಂದ ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಈ ಭಾಗದಲ್ಲಿ 3.5 ಮೀಟರ್‌ಗಳಷ್ಟು ಎತ್ತರದ ಅಲೆಗಳು ಏಳುತ್ತಿದ್ದು, ಗಂಟೆಗೆ ಗರಿಷ್ಠ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಇಲಾಖೆ ಎಚ್ಚರಿಸಿದೆ.

ಸೆ.24ರಿಂದ ರಾಜ್ಯದಾದ್ಯಂತ ಮಳೆ ತಗ್ಗಲಿದ್ದು, ಕೆಲವೆಡೆ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ ಎಂದು ತಿಳಿಸಿದೆ.

ADVERTISEMENT

ಮಳೆ-ಎಲ್ಲಿ,ಎಷ್ಟು?: ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಗರಿಷ್ಠ 14 ಸೆಂ.ಮೀ ಮಳೆಯಾಗಿದೆ. ಭಾಗಮಂಡಲ 12, ಅಂಕೋಲಾ 11, ಕಾರವಾರ 9, ಭಟ್ಕಳ, ವಿರಾಜಪೇಟೆ, ಹೊಸನಗರ 8, ತೀರ್ಥಹಳ್ಳಿ 6, ಮೂಡುಬಿದರೆ, ಸುಳ್ಯ, ಪುತ್ತೂರು, ಉಪ್ಪಿನಂಗಡಿ, ಉಡುಪಿ, ಸಾಗರ ,ಮೂಡಿಗೆರೆ 5, ಕುಂದಾಪುರ, ಮಡಿಕೇರಿ 4, ಹಾಸನ, ಕೊಪ್ಪ 2, ನಿಪ್ಪಾಣಿ, ಬೆಳಗಾವಿ, ಜಮಖಂಡಿ, ಧಾರವಾಡ, ಶಿಕಾರಿಪುರದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.