ADVERTISEMENT

Karnataka Rains: 30 ಜಿಲ್ಲೆಗೆ ‘ಯೆಲ್ಲೊ ಅಲರ್ಟ್‌’

​ಪ್ರಜಾವಾಣಿ ವಾರ್ತೆ
Published 1 ಜುಲೈ 2025, 15:50 IST
Last Updated 1 ಜುಲೈ 2025, 15:50 IST
   

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರಿದಿದ್ದು, 30 ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್‌’ ಘೋಷಿಸಲಾಗಿದೆ.

ಉಡುಪಿ, ದಕ್ಷಿಣ ಕನ್ನಡ ಜಿಲ್ಲೆ ಹೊರತು ಪಡಿಸಿ ಉಳಿದ ಜಿಲ್ಲೆಗಳಲ್ಲಿ ಬುಧವಾರ ಭಾರಿ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕೆಲವೆಡೆ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಭಾರಿ ಮಳೆಯ ಮುನ್ಸೂಚನೆ ನೀಡಲಾದ ಜಿಲ್ಲೆಗಳಲ್ಲಿ ಹಲವೆಡೆ ಗಂಟೆಗೆ 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸಬಹುದು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗಂಟೆಗೆ 35ರಿಂದ 45 ಕಿ.ಮೀ. ವೇಗದಲ್ಲಿ ಗಾಳಿ ಬೀಸಬಹುದು ಮತ್ತು ಸಾಧಾರಣ ಮಳೆಯಾಗಬಹುದು ಎಂದು ಹೇಳಿದೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಗುಡುಗು ಹಾಗೂ ಭಾರಿ ಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಪ್ರತಿ ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ತಿಳಿಸಿದೆ.

ಮಂಗಳವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ಉತ್ತರ ಕನ್ನಡ ಜಿಲ್ಲೆಯ ಕ್ಯಾಸಲ್ ರಾಕ್‌ನಲ್ಲಿ 4 ಸೆಂ. ಮೀ. ಮಳೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ವೀಕ್ಷಣಾಲಯ, ಕಲಬುರಗಿ ಜಿಲ್ಲೆಯ ಚಿಂಚೋಳಿ, ಬೀದರ್‌ ಮತ್ತು ಕೊಡಗು ಜಿಲ್ಲೆಯ ಸೋಮವಾರಪೇಟೆಯಲ್ಲಿ ತಲಾ 3 ಸೆಂ.ಮೀ. ಮಳೆ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.