ADVERTISEMENT

ರಾಜ್ಯಸಭೆ ಚುನಾವಣೆ | ಜೆಡಿಎಸ್‌ ಜತೆ ಖರ್ಗೆ ಮಾತನಾಡಿಲ್ಲ: ಡಿ.ಕೆ. ಶಿವಕುಮಾರ್

​ಪ್ರಜಾವಾಣಿ ವಾರ್ತೆ
Published 4 ಜೂನ್ 2022, 13:46 IST
Last Updated 4 ಜೂನ್ 2022, 13:46 IST
ಡಿ.ಕೆ.ಶಿವಕುಮಾರ್
ಡಿ.ಕೆ.ಶಿವಕುಮಾರ್   

ತುಮಕೂರು: ರಾಜ್ಯಸಭೆ ಚುನಾವಣೆಯಲ್ಲಿ ಜೆಡಿಎಸ್‌ಗೆ ಸಹಕಾರ, ಬೆಂಬಲ ನೀಡುವ ಸಂಬಂಧ ಪಕ್ಷದ ಹಿರಿಯರಾದ ಮಲ್ಲಿಕಾರ್ಜುನ ಖರ್ಗೆ ಅವರು ಆ ಪಕ್ಷದ ಮುಖಂಡರ ಜತೆ ಮಾತುಕತೆ ನಡೆಸಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಲ್ಲಿ ಶನಿವಾರ ಸ್ಪಷ್ಟಪಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪಕ್ಷದ ಹಿತದೃಷ್ಟಿಯಿಂದ, ಒಗ್ಗಟ್ಟಿನಿಂದ ಎರಡನೇ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಲಾಗಿದೆ. ಖರ್ಗೆ ಅವರು ಯಾರೊಂದಿಗೂ ಮಧ್ಯಸ್ಥಿಕೆ ವಹಿಸಲು ದೆಹಲಿಗೆ ಹೋಗಿರಲಿಲ್ಲ. ಪಕ್ಷದ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳಿದ್ದರು. ಅದು ಬಿಟ್ಟರೆ ಜೆಡಿಎಸ್‌ ಜತೆ ನಾವು ಮಾತುಕತೆ ನಡೆಸಿಲ್ಲ. ಅವರೂ ನಮ್ಮನ್ನು ಸಂಪರ್ಕಿಸಿಲ್ಲ’ ಎಂದು ಸ್ಪಷ್ಟಪಡಿಸಿದರು.

‘ಜೆಡಿಎಸ್‌ನವರಂತೆ ನಮಗೂ ಇತರ ಪಕ್ಷದಲ್ಲೂ ಸ್ನೇಹಿತರು ಇರುತ್ತಾರೆ. ಆತ್ಮ ಸಾಕ್ಷಿಯಿಂದ ಮತ ಕೇಳುತ್ತೇವೆ. ಒಗ್ಗಟ್ಟಿನಿಂದ ಚುನಾವಣೆ ಎದುರಿಸುತ್ತೇವೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.