ಬೆಂಗಳೂರು: ‘ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸುವ ಪ್ರಕ್ರಿಯೆ ಕೈ ಬಿಡಲಾಗಿದೆ’ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ.
‘ಪ್ರಶಸ್ತಿಗೆ ಅರ್ಹ ವ್ಯಕ್ತಿಗಳನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ರಚಿಸಲಾಗುವ ಸಲಹಾ ಸಮಿತಿ ಹಾಗೂ ಉನ್ನತ ಮಟ್ಟದ ಆಯ್ಕೆ ಸಮಿತಿಗಳು ಅಂತಿಮಗೊಳಿಸಲಿವೆ. ಈ ವರ್ಷ 70 ಅರ್ಹ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗುವುದು’ ಎಂದು ತಿಳಿಸಿದ್ದಾರೆ.
‘ಈಗಾಗಲೇ ಇಲಾಖೆಗೆ ಸಲ್ಲಿಕೆಯಾಗಿರುವ ಸ್ವಯಂ ಅರ್ಜಿಗಳನ್ನು ಸಹ ಪ್ರಶಸ್ತಿ ಸಲಹಾ ಸಮಿತಿ ಮುಂದೆ ಮಂಡಿಸಲಾಗುವುದು’ ಎಂದು ಅವರು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.