ADVERTISEMENT

Covid-19 Karnataka Update: 28,869 ಹೊಸ ಪ್ರಕರಣ, 52,257 ಮಂದಿ ಗುಣಮುಖ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 20 ಮೇ 2021, 15:40 IST
Last Updated 20 ಮೇ 2021, 15:40 IST
ಕೊರೊನಾ ವೈರಸ್‌ ಸೋಂಕು (ಸಾಂದರ್ಭಿಕ ಚಿತ್ರ)
ಕೊರೊನಾ ವೈರಸ್‌ ಸೋಂಕು (ಸಾಂದರ್ಭಿಕ ಚಿತ್ರ)   

ಬೆಂಗಳೂರು: ರಾಜ್ಯದಲ್ಲಿ ಗುರುವಾರ ಒಂದೇ ದಿನ 52,257 ಮಂದಿ ಕೋವಿಡ್ ಸೋಂಕಿತರು ಗುಣಮುಖರಾಗಿದ್ದಾರೆ.

ಇದೇ ಅವಧಿಯಲ್ಲಿ ರಾಜ್ಯದಲ್ಲಿ 28,869 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 548 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 23,35,524 ಕ್ಕೆ ಏರಿಕೆಯಾಗಿದೆ. ಆ ಪೈಕಿ 23,854 ಮಂದಿ ಸಾವಿಗೀಡಾಗಿದ್ದಾರೆ. ಸೋಂಕು ಕಾಣಿಸಿಕೊಂಡಾಗಿನಿಂದ ಇದುವರೆಗೆ 17,76,695 ಮಂದಿ ಗುಣಮುಖರಾಗಿದ್ದಾರೆ. ಸದ್ಯ ರಾಜ್ಯದಲ್ಲಿ 5,34,954 ಸಕ್ರಿಯ ಪ್ರಕರಣಗಳಿವೆ.

ಬೆಂಗಳೂರಿನಲ್ಲಿ ಇಂದು 9,409 ಹೊಸ ಪ್ರಕರಣಗಳು ವರದಿಯಾಗಿದ್ದು, 289 ಮಂದಿ ಮೃತಪಟ್ಟಿದ್ದಾರೆ. ಉಳಿದಂತೆ ಮೈಸೂರು 1,879 ತುಮಕೂರು 1,796, ಬಳ್ಳಾರಿ 1,109, ಬೆಳಗಾವಿ 948, ಚಿಕ್ಕಮಗಳೂರು 945, ದಕ್ಷಿಣ ಕನ್ನಡ 926, ಉಡುಪಿ ಜಿಲ್ಲೆಯಲ್ಲಿ 809 ಹೊಸ ಪ್ರಕರಣಗಳು ಪತ್ತೆಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.