ADVERTISEMENT

Covid-19 Karnataka Update: 32,218 ಹೊಸ ಪ್ರಕರಣ, 52,581 ಮಂದಿ ಗುಣಮುಖ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 21 ಮೇ 2021, 13:25 IST
Last Updated 21 ಮೇ 2021, 13:25 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ 24 ಗಂಟೆಗಳ ಅಂತರದಲ್ಲಿ 52,581 ಮಂದಿ ಕೋವಿಡ್ ಸೋಂಕಿತರು ಗುಣಮುಖರಾಗಿದ್ದಾರೆ.

ಇದೇ ಅವಧಿಯಲ್ಲಿ ರಾಜ್ಯದಲ್ಲಿ 32,218 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 353 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 23,67,742 ಕ್ಕೆ ಏರಿಕೆಯಾಗಿದೆ. ಆ ಪೈಕಿ 24,207 ಮಂದಿ ಸಾವಿಗೀಡಾಗಿದ್ದಾರೆ. ಸೋಂಕು ಕಾಣಿಸಿಕೊಂಡಾಗಿನಿಂದ ಇದುವರೆಗೆ 18,29,276 ಮಂದಿ ಗುಣಮುಖರಾಗಿದ್ದಾರೆ. ಸದ್ಯ ರಾಜ್ಯದಲ್ಲಿ 5,14,238 ಸಕ್ರಿಯ ಪ್ರಕರಣಗಳಿವೆ.

ADVERTISEMENT

ಬೆಂಗಳೂರಿನಲ್ಲಿ ಇಂದು 9,591 ಹೊಸ ಪ್ರಕರಣಗಳು ವರದಿಯಾಗಿದ್ದು, 129 ಮಂದಿ ಮೃತಪಟ್ಟಿದ್ದಾರೆ. ಉಳಿದಂತೆ ಮೈಸೂರು 2,355, ಹಾಸನ 2,071, ತುಮಕೂರು 1,773, ಬಳ್ಳಾರಿ 1,650 ಬೆಳಗಾವಿ 1,138, ಶಿವಮೊಗ್ಗ 892, ದಕ್ಷಿಣ ಕನ್ನಡ 864, ಚಿಕ್ಕಬಳ್ಳಪುರ 845, ಚಿತ್ರದುರ್ಗ ಜಿಲ್ಲೆಯಲ್ಲಿ 838 ಹೊಸ ಪ್ರಕರಣಗಳು ಪತ್ತೆಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.