ADVERTISEMENT

ವಿವಿಧ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳ ನೇಮಕಾತಿ ಪರೀಕ್ಷೆ: ಕೀ ಉತ್ತರ ಪ್ರಕಟ

​ಪ್ರಜಾವಾಣಿ ವಾರ್ತೆ
Published 12 ಜನವರಿ 2026, 16:15 IST
Last Updated 12 ಜನವರಿ 2026, 16:15 IST
   

ಬೆಂಗಳೂರು: ತಾಂತ್ರಿಕ ಶಿಕ್ಷಣ, ಬಿಡಿಎ, ಬೆಂಗಳೂರು ಜಲಮಂಡಳಿ, ಕೃಷಿ ಮಾರಾಟ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳ ನೇಮಕಾತಿಗೆ ಇದೇ ಜ.10 ಮತ್ತು 11ರಂದು ನಡೆಸಿದ್ದ ಪರೀಕ್ಷೆಗಳ ಕೀ ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೋಮವಾರ ಪ್ರಕಟಿಸಿದೆ.

ಕೀ ಉತ್ತರಗಳಿಗೆ ಆಕ್ಷೇಪಣೆಗಳು ಇದ್ದಲ್ಲಿ ಜ.14ರಂದು ಬೆಳಿಗ್ಗೆ 11 ಗಂಟೆ ಒಳಗೆ ನಿಗದಿತ ಲಿಂಕ್‌ ಮೂಲಕ ಸಲ್ಲಿಸಬೇಕು. ಬಳಿಕ ಪರಿಶೀಲಿಸಿ ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT