ಬೆಂಗಳೂರು: ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶ ಪಡೆಯುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಲ ವಿತರಿಸಲು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ₹20 ಕೋಟಿ ಬಿಡುಗಡೆ ಮಾಡಿದೆ.
ನೀಟ್, ಸಿಇಟಿ ಬರೆದು ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಲ ನೀಡಲು ಈ ಹಣ ಬಳಸಿಕೊಳ್ಳಲಾಗುತ್ತದೆ. ಆಯಾ ಕಾಲೇಜುಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಿಗದಿಪಡಿಸಿದ ಶುಲ್ಕದ ಆಧಾರದಲ್ಲಿ ಪ್ರತಿ ವಿದ್ಯಾರ್ಥಿಗೆ ₹50 ಸಾವಿರದಿಂದ ₹5 ಲಕ್ಷದವರೆಗೆ ಸಾಲಸೌಲಭ್ಯ ನೀಡಲಾಗುತ್ತದೆ. ಈ ಕುರಿತ ಒಪ್ಪಂದ ಪತ್ರವನ್ನು ಕೆಇಎಗೆ ಹಸ್ತಾಂತರಿಸಲಾಗಿದೆ ಎಂದು ಸಚಿವ ಜಮೀರ್ ಆಹಮದ್ ಖಾನ್ ಮಾಹಿತಿ ನೀಡಿದರು.
2025–26ನೇ ಸಾಲಿನಲ್ಲಿ ಅಲ್ಪಸಂಖ್ಯಾತ ಸಮುದಾಯದ 5,890 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ನೀಟ್, ಸಿಇಟಿ ಮೂಲಕ ಆಯ್ಕೆಯಾದವರಿಗಷ್ಟೇ ಶೈಕ್ಷಣಿಕ ಸಾಲದ ನೆರವು ಸಿಗಲಿದೆ. 2024-25ನೇ ಸಾಲಿನಲ್ಲಿ ಅರಿವು ಶಿಕ್ಷಣ ಸಾಲ ಯೋಜನೆಯಲ್ಲಿ ಕೆಲವು ತಾಂತ್ರಿಕ ಕಾರಣದಿಂದ ಶಿಕ್ಷಣ ಸಂಸ್ಥೆಗಳಿಗೆ ಹಣ ಸಂದಾಯ ಆಗಿರಲಿಲ್ಲ. 1,018 ವಿದ್ಯಾರ್ಥಿಗಳ ಬಾಕಿ ಮೊತ್ತ ₹12.50 ಕೋಟಿ ಬಿಡುಗಡೆ ಮಾಡಲಾಗಿದೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.