ADVERTISEMENT

Covid Karnataka Update|107 ಹೊಸ ಪ್ರಕರಣ ಪತ್ತೆ: ಪಾಸಿಟಿವಿಟಿ ದರ ಶೇ 1.50ಕ್ಕೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 3 ಮೇ 2022, 14:29 IST
Last Updated 3 ಮೇ 2022, 14:29 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ಕರ್ನಾಟಕ 107 ಹೊಸ ಕೋವಿಡ್‌ ಪ್ರಕರಣಗಳನ್ನು ಕಂಡಿದೆ. ಇದರೊಂದಿಗೆ ಒಟ್ಟಾರೆ ಸೋಂಕಿತರ ಸಂಖ್ಯೆ 39,47,944ಕ್ಕೆ ತಲುಪಿದೆ.

ಬೆಂಗಳೂರಿನಲ್ಲೇ 100 ಪ್ರಕರಣಗಳು ಪತ್ತೆಯಾಗಿವೆ. 103 ಮಂದಿ ಚೇತರಿಸಿಕೊಂಡು ಬಿಡುಗಡೆಯಾಗಿದ್ದಾರೆ.

ಇದೇ ಅವಧಿಯಲ್ಲಿ 107 ಮಂದಿ ಚೇತರಿಸಿಕೊಂಡಿದ್ದಾರೆ. ಸದ್ಯ ರಾಜ್ಯದಲ್ಲಿ 1,815 ಸಕ್ರಿಯ ಪ್ರಕರಣಗಳಿವೆ.

ADVERTISEMENT

ರಾಜ್ಯದಲ್ಲಿ ಕೋವಿಡ್‌ ಕಾರಣದಿಂದಾಗಿ ಒಂದು ದಿನದ ಈ ಅವಧಿಯಲ್ಲಿ ಯಾವುದೇ ಸಾವು ಸಂಭವಿಸಿಲ್ಲ.

ಸದ್ಯ, ಕರ್ನಾಟಕದ ದೈನಂದಿನ ಪಾಸಿಟಿವಿಟಿ ದರ ಶೇ 1.50ಕ್ಕೆ ತಲುಪಿದೆ. ವಾರದ ಪಾಸಿಟಿವಿಟಿ ದರ ಶೇ 1.33 ಆಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.