ADVERTISEMENT

Karnataka Covid Update: 1 ಸಾವಿರಕ್ಕೂ ಹೆಚ್ಚು ಹೊಸ ಪ್ರಕರಣ, ಒಬ್ಬರ ಸಾವು 

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 26 ಜುಲೈ 2022, 15:56 IST
Last Updated 26 ಜುಲೈ 2022, 15:56 IST
ಕೋವಿಡ್ ಲಸಿಕೆ ಪಡೆಯುತ್ತಿರುವ ಯುವತಿ –ಪಿಟಿಐ ಚಿತ್ರ
ಕೋವಿಡ್ ಲಸಿಕೆ ಪಡೆಯುತ್ತಿರುವ ಯುವತಿ –ಪಿಟಿಐ ಚಿತ್ರ   

ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ 1,425 ಕೋವಿಡ್ ಹೊಸ ಪ್ರಕರಣಗಳು ದೃಢಪಟ್ಟಿವೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 39,98,142ಕ್ಕೆ ಏರಿಕೆಯಾಗಿದೆ. ಆ ಪೈಕಿ 40,092 ಮಂದಿ ಸೋಂಕಿತರು ಸಾವಿಗೀಡಾಗಿದ್ದಾರೆ.

ಈವರೆಗೆ 39,49,147 ಮಂದಿ ಗುಣಮುಖರಾಗಿದ್ದಾರೆ. ಸದ್ಯ ರಾಜ್ಯದಲ್ಲಿ 8,861 ಸಕ್ರಿಯ ಪ್ರಕರಣಗಳಿದ್ದು, ದೈನಂದಿನ ಪಾಸಿಟಿವಿಟಿ ದರ ಶೇ 6.15 ರಷ್ಟಿದೆ.

ADVERTISEMENT

ಬೆಂಗಳೂರಿನಲ್ಲಿ 1198, ಮೈಸೂರಿನಲ್ಲಿ 53, ಬೆಂಗಳೂರು ಗ್ರಾಮಾಂತರದಲ್ಲಿ 19, ತುಮಕೂರಿನಲ್ಲಿ 18 ಹೊಸ ಪ್ರಕರಣಗಳು ವರದಿಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.