ADVERTISEMENT

Covid-19 Karnataka Update: 25,005 ಹೊಸ ಪ್ರಕರಣ, 8 ಮಂದಿ ಸೋಂಕಿತರು ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 13 ಜನವರಿ 2022, 15:19 IST
Last Updated 13 ಜನವರಿ 2022, 15:19 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ರಾಜ್ಯದಲ್ಲಿ ಗುರುವಾರ 25,005 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, ಎಂಟು ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಕಳೆದ 24 ಗಂಟೆಗಳಲ್ಲಿ 2,363 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಸದ್ಯ ರಾಜ್ಯದಲ್ಲಿ 1,15,733 ಸಕ್ರಿಯ ಪ್ರಕರಣಗಳಿವೆ’ ಎಂದು ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ 12.39 ರಷ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ADVERTISEMENT

ಬೆಂಗಳೂರಿನಲ್ಲಿ ಇಂದು 18,374 ಹೊಸ ಪ್ರಕರಣ ಪತ್ತೆಯಾಗಿದ್ದು, ಮೂವರು ಸೋಂಕಿತರು ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.