ADVERTISEMENT

Covid-19 Karnataka Update: 255 ಹೊಸ ಪ್ರಕರಣ ದೃಢ, 7 ಮಂದಿ ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 16 ನವೆಂಬರ್ 2021, 16:19 IST
Last Updated 16 ನವೆಂಬರ್ 2021, 16:19 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ 255 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 7 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 29,92,276 ಕ್ಕೆ ಏರಿಕೆಯಾಗಿದೆ. ಆ ಪೈಕಿ 38,153 ಮಂದಿ ಸಾವಿಗೀಡಾಗಿದ್ದಾರೆ.

ಈವರೆಗೆ 29,46,601 ಮಂದಿ ಗುಣಮುಖರಾಗಿದ್ದಾರೆ. ಸದ್ಯ ರಾಜ್ಯದಲ್ಲಿ 7,493 ಸಕ್ರಿಯ ಪ್ರಕರಣಗಳಿವೆ.

ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ 0.38 ರಷ್ಟಿದ್ದು, ಮರಣ ಪ್ರಮಾಣ ಶೇ 2.74 ರಷ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT