ADVERTISEMENT

Covid-19 Karnataka Update: 270 ಮಂದಿಗೆ ಸೋಂಕು, 7,271 ಸಕ್ರಿಯ ಪ್ರಕರಣಗಳು

​ಪ್ರಜಾವಾಣಿ ವಾರ್ತೆ
Published 25 ಡಿಸೆಂಬರ್ 2021, 14:38 IST
Last Updated 25 ಡಿಸೆಂಬರ್ 2021, 14:38 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ರಾಜ್ಯದಲ್ಲಿ ಶನಿವಾರ 270 ಹೊಸ ಕೋವಿಡ್‌ ಹೊಸ ಪ್ರಕರಣಗಳು ದೃಢಪಟ್ಟಿದ್ದು, ನಾಲ್ವರು ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 30 ಲಕ್ಷದ (30,04,239) ಗಡಿ ದಾಟಿದೆ. ಆ ಪೈಕಿ 38,309 ಮಂದಿ ಸೋಂಕಿತರು ಸಾವಿಗೀಡಾಗಿದ್ದಾರೆ.

ಇದುವರೆಗೆ 29,58,630 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಸದ್ಯ 7,271 ಸಕ್ರಿಯ ಪ್ರಕರಣಗಳಿವೆ. ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ 0.27 ರಷ್ಟಿದ್ದು, ಮರಣ ಪ್ರಮಾಣ ಶೇ 1.48 ರಷ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ADVERTISEMENT

ಬೆಂಗಳೂರಿನಲ್ಲಿ ಇಂದು 152 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಇಬ್ಬರು ಮೃತಪಟ್ಟಿದ್ದಾರೆ. ದಕ್ಷಿಣ ಕನ್ನಡ 11, ಕೊಡಗು 25, ಮೈಸೂರು 13, ತುಮಕೂರು ಮತ್ತು ಉಡುಪಿಯಲ್ಲಿ ತಲಾ 13 ಪ್ರಕರಣಗಳು ವರದಿಯಾಗಿದ್ದರೆ, ಉತ್ತರ ಕನ್ನಡ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ತಲಾ 05 ಪ್ರಕರಣಗಳು ದೃಢಪಟ್ಟಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.