ADVERTISEMENT

Covid-19 Karnataka Update: 299 ಕೋವಿಡ್‌ ಪ್ರಕರಣ ದೃಢ, 6 ಮಂದಿ ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 7 ಡಿಸೆಂಬರ್ 2021, 13:20 IST
Last Updated 7 ಡಿಸೆಂಬರ್ 2021, 13:20 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ 299 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 6 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 29,98,699 ಕ್ಕೆ ಏರಿಕೆಯಾಗಿದೆ. ಆ ಪೈಕಿ 38,243 ಮಂದಿ ಸೋಂಕಿತರು ಸಾವಿಗೀಡಾಗಿದ್ದಾರೆ.

ಇದುವರೆಗೆ 29,53,327 ಮಂದಿ ಗುಣಮುಖರಾಗಿದ್ದಾರೆ. ಸದ್ಯ ರಾಜ್ಯದಲ್ಲಿ 7,100 ಸಕ್ರಿಯ ಪ್ರಕರಣಗಳಿವೆ. ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ 0.36 ರಷ್ಟಿದ್ದು, ಮರಣ ಪ್ರಮಾಣ ಶೇ 2.00 ರಷ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ADVERTISEMENT

ಬೆಂಗಳೂರಿನಲ್ಲಿ ಇಂದು 215 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಮೂವರು ಸೋಂಕಿತರು ಮೃತಪಟ್ಟಿದ್ದಾರೆ. ದಕ್ಷಿಣ ಕನ್ನಡ 14, ಕೊಡಗು 12, ಮೈಸೂರು ಜಿಲ್ಲೆಯಲ್ಲಿ 11 ಹೊಸ ಪ್ರಕರಣಗಳು ವರದಿಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.