ADVERTISEMENT

Covid-19 Karnataka Update: 321 ಮಂದಿಗೆ ಸೋಂಕು, 7,138 ಸಕ್ರಿಯ ಪ್ರಕರಣಗಳು

​ಪ್ರಜಾವಾಣಿ ವಾರ್ತೆ
Published 22 ಡಿಸೆಂಬರ್ 2021, 18:15 IST
Last Updated 22 ಡಿಸೆಂಬರ್ 2021, 18:15 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ರಾಜ್ಯದ 19 ಜಿಲ್ಲೆಗಳಲ್ಲಿ ಕೋವಿಡ್ ಸೋಂಕು ಪ್ರಕರಣಗಳು ಬುಧವಾರ ಪತ್ತೆಯಾಗಿದ್ದು, 321 ಮಂದಿ ಹೊಸದಾಗಿ ಸೋಂಕಿತರಾಗಿರುವುದು ದೃಢಪಟ್ಟಿದೆ.

ಒಂದು ದಿನದಲ್ಲಿ 97 ಸಾವಿರ ಮಾದರಿಗಳನ್ನು ಪರೀಕ್ಷಿಸಲಾಗಿದೆ. ಸೋಂಕು ದೃಢ ಪ್ರಮಾಣ ಶೇ 0.32ರಷ್ಟಿದೆ. ನಾಲ್ಕು ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಎರಡಂಕಿ, 14 ಜಿಲ್ಲೆಗಳಲ್ಲಿ ಒಂದಂಕಿಯಲ್ಲಿದೆ. ಬಾಗಲಕೋಟೆ, ಬಳ್ಳಾರಿ ಸೇರಿದಂತೆ 11 ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು ವರದಿಯಾಗಿಲ್ಲ.

ಬೆಂಗಳೂರು ನಗರದಲ್ಲಿ 211 ಮಂದಿಗೆ ಸೋಂಕು ತಗುಲಿದೆ. ದಕ್ಷಿಣ ಕನ್ನಡ, ಕೊಡಗಿನಲ್ಲಿ ತಲಾ 20, ಮೈಸೂರಿನಲ್ಲಿ 19, ಉತ್ತರ ಕನ್ನಡದಲ್ಲಿ 13 ಪ್ರಕರಣಗಳುವರದಿಯಾಗಿವೆ.ಉಳಿದ ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು 10ಕ್ಕಿಂತ ಕಡಿಮೆ ಇವೆ. ಈವರೆಗೆ ವರದಿಯಾದ ಒಟ್ಟು ಪ್ರಕರಣಗಳ ಸಂಖ್ಯೆ 30.03 ಲಕ್ಷಕ್ಕೆ ಏರಿಕೆಯಾಗಿದೆ.

ADVERTISEMENT

ಸೋಂಕಿತರಲ್ಲಿ 253 ಮಂದಿ ಚೇತರಿಸಿಕೊಂಡಿದ್ದಾರೆ. ಗುಣಮುಖರಾದವರ ಸಂಖ್ಯೆ 29.57 ಲಕ್ಷ ದಾಟಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 7,138ಕ್ಕೆ ಏರಿದೆ. ಬೆಂಗಳೂರಿನಲ್ಲಿ 5,740 ಸೋಂಕಿತರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.