ADVERTISEMENT

Covid-19 Karnataka Update: 522 ಹೊಸ ಪ್ರಕರಣ ದೃಢ, 4 ಮಂದಿ ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 31 ಜನವರಿ 2021, 15:21 IST
Last Updated 31 ಜನವರಿ 2021, 15:21 IST
ಕೊರೊನಾ ವೈರಸ್‌(ಸಾಂದರ್ಭಿಕ ಚಿತ್ರ)
ಕೊರೊನಾ ವೈರಸ್‌(ಸಾಂದರ್ಭಿಕ ಚಿತ್ರ)   

ಬೆಂಗಳೂರು: ರಾಜ್ಯದಾದ್ಯಂತ 24 ಗಂಟೆಗಳಲ್ಲಿ 522 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 4 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಇದರೊಂದಿಗೆ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 9,39,387 ಕ್ಕೆ ಏರಿಕೆಯಾಗಿದೆ. ಆ ಪೈಕಿ 12,217 ಮಂದಿ ಸಾವಿಗೀಡಾಗಿದ್ದಾರೆ.

ಚೇತರಿಕೆ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಿದ್ದು, ಈವರೆಗೆ 9,21,122 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯ 6,029 ಸಕ್ರಿಯ ಪ್ರಕರಣಗಳಿವೆ.

ADVERTISEMENT

ಇಂದು ಬೆಂಗಳೂರಿನಲ್ಲಿ 242 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 212 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದಂತೆ ಮೈಸೂರು 53, ದಕ್ಷಿಣ ಕನ್ನಡ 33, ತುಮಕೂರು 23, ಕಲಬುರ್ಗಿ 18, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 17 ಹೊಸ ಪ್ರಕರಣಗಳು ದಾಖಲಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.