ADVERTISEMENT

Covid-19 Karnataka Update: 5,983 ಹೊಸ ಪ್ರಕರಣ, 138 ಮಂದಿ ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 17 ಜೂನ್ 2021, 15:20 IST
Last Updated 17 ಜೂನ್ 2021, 15:20 IST
ಹುಬ್ಬಳ್ಳಿಯಲ್ಲಿ ಕೊರೊನಾ ವೈರಸ್‌ ಭೀತಿಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕಿಮ್ಸ್‌ಆಸ್ಪತ್ರೆಯಲ್ಲಿ ಮಗುವಿಗೆ ಕೋವಿಡ್–19 ಪರೀಕ್ಷೆ ನಡೆಸಲಾಯಿತು – ಪ್ರಜಾವಾಣಿ ಚಿತ್ರ/ ತಾಜುದ್ದೀನ್‌ ಆಜಾದ್‌
ಹುಬ್ಬಳ್ಳಿಯಲ್ಲಿ ಕೊರೊನಾ ವೈರಸ್‌ ಭೀತಿಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕಿಮ್ಸ್‌ಆಸ್ಪತ್ರೆಯಲ್ಲಿ ಮಗುವಿಗೆ ಕೋವಿಡ್–19 ಪರೀಕ್ಷೆ ನಡೆಸಲಾಯಿತು – ಪ್ರಜಾವಾಣಿ ಚಿತ್ರ/ ತಾಜುದ್ದೀನ್‌ ಆಜಾದ್‌   

ಬೆಂಗಳೂರು: ರಾಜ್ಯದಾದ್ಯಂತ ಗುರುವಾರ 5,983 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 138 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 27,90,338 ಕ್ಕೆ ಏರಿಕೆಯಾಗಿದೆ. ಆ ಪೈಕಿ 33,434 ಮಂದಿ ಸಾವಿಗೀಡಾಗಿದ್ದಾರೆ.

ಇದುವರೆಗೆ 26,10,157 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯ ರಾಜ್ಯದಲ್ಲಿ 1,46,726 ಸಕ್ರಿಯ ಪ್ರಕರಣಗಳಿವೆ.

ADVERTISEMENT

ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 3.77ರಷ್ಟಿದ್ದು, ಮರಣ ಪ್ರಮಾಣ ಶೇ.2.30 ರಷ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಇಂದು ಬೆಂಗಳೂರಿನಲ್ಲಿ 1209, ದಕ್ಷಿಣ ಕನ್ನಡ 679, ಮೈಸೂರು 596, ಹಾಸನ 424, ಮಂಡ್ಯ 309, ತುಮಕೂರು 289, ಶಿವಮೊಗ್ಗ ಜಿಲ್ಲೆಯಲ್ಲಿ 229 ಹೊಸ ಪ್ರಕರಣಗಳು ವರದಿಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.