ADVERTISEMENT

Covid-19 Karnataka Update: ರಾಜ್ಯದಲ್ಲಿ ಇಂದು 833 ಹೊಸ ಪ್ರಕರಣಗಳು ದಾಖಲು

​ಪ್ರಜಾವಾಣಿ ವಾರ್ತೆ
Published 18 ಏಪ್ರಿಲ್ 2021, 13:34 IST
Last Updated 18 ಏಪ್ರಿಲ್ 2021, 13:34 IST
   

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಕೋವಿಡ್‌–19 ದೃಢಪಟ್ಟ 833 ಹೊಸ ಪ್ರಕರಣಗಳು ದಾಖಲಾಗಿದ್ದು, ಇದೇ ಅವಧಿಯಲ್ಲಿ 5 ಮಂದಿ ಸಾವಿಗೀಡಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಇದರೊಂದಿಗೆ ರಾಜ್ಯದಲ್ಲಿ ಒಟ್ಟು 9,58,417 ಪ್ರಕರಣಗಳು ವರದಿಯಾಗಿದ್ದು, ಸಾವಿನ ಸಂಖ್ಯೆ 12,386ಕ್ಕೆ ತಲುಪಿದೆ. ಶುಕ್ರವಾರ ಗುಣಮುಖರಾದ545 ಮಂದಿಯೂ ಸೇರಿದಂತೆ ಇದುವರೆಗೆ ಒಟ್ಟು 9,37,898 ಸೋಂಕಿತರು ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಸದ್ಯ8,114 ಸಕ್ರಿಯ ಪ್ರಕರಣಗಳಿವೆ. ಐಸಿಯುನಲ್ಲಿ 125 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಲ್ಲಿ6,008 ಸಕ್ರಿಯ ಪ್ರಕರಣ
ಬೆಂಗಳೂರಿನಲ್ಲಿ ಇಂದು526 ಹೊಸ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ನಗರಲ್ಲಿ ವರದಿಯಾದ ಒಟ್ಟು ಪ್ರಕರಣಗಳ ಸಂಖ್ಯೆ 4,10,181 ಆಗಿದೆ. ಇದರಲ್ಲಿ 3,99,656 ಸೋಂಕಿತರು ಗುಣಮುಖರಾಗಿದ್ದು, 4,516 ಮಂದಿ ಮೃತಪಟ್ಟಿದ್ದಾರೆ. ಇನ್ನೂ 6,008 ಸಕ್ರಿಯ ಪ್ರಕರಣಗಳು ಇವೆ.

ADVERTISEMENT

ಉಳಿದಂತೆ ಕಲಬುರ್ಗಿ (262), ದಕ್ಷಣ ಕನ್ನಡ (232), ತುಮಕೂರಿನಲ್ಲಿ (210), ಮೈಸೂರು (188), ಉಡುಪಿ (117) ಬಳ್ಳಾರಿಯಲ್ಲಿ (103) ನೂರಕ್ಕಿಂತ ಹೆಚ್ಚು ಪ್ರಕರಣಗಳು ಸಕ್ರಿಯ ಪ್ರಕರಣಗಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.