ADVERTISEMENT

Covid-19 Karnataka Update: 8,449 ಹೊಸ ಪ್ರಕರಣ, 4 ಮಂದಿ ಸೋಂಕಿತರು ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 7 ಜನವರಿ 2022, 13:46 IST
Last Updated 7 ಜನವರಿ 2022, 13:46 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ 8,449 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, ನಾಲ್ವರು ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 30,31,052 ಕ್ಕೆ ಏರಿಕೆಯಾಗಿದೆ. ಆ ಪೈಕಿ 38,362 ಮಂದಿ ಸೋಂಕಿತರು ಸಾವಿಗೀಡಾಗಿದ್ದಾರೆ.

ಇದುವರೆಗೆ 29,62,548 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಸದ್ಯ ರಾಜ್ಯದಲ್ಲಿ 30,113 ಸಕ್ರಿಯ ಪ್ರಕರಣಗಳಿವೆ. ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ 4.15 ರಷ್ಟಿದ್ದು, ಮರಣ ಪ್ರಮಾಣ ಶೇ 0.04 ರಷ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ADVERTISEMENT

ಬೆಂಗಳೂರಿನಲ್ಲಿ ಇಂದು 6,812 ಹೊಸ ಪ್ರಕರಣ ಪತ್ತೆಯಾಗಿದ್ದು, ಮೂವರು ಸೋಂಕಿತರು ಮೃತಪಟ್ಟಿದ್ದಾರೆ. ಮೈಸೂರು 219, ದಕ್ಷಿಣ ಕನ್ನಡ 211, ಉಡುಪಿ 148, ಮಂಡ್ಯ 129, ಬೆಳಗಾವಿ 114, ತುಮಕೂರು ಜಿಲ್ಲೆಯಲ್ಲಿ ಹೊಸದಾಗಿ 96 ಪ್ರಕರಣಗಳು ದೃಢಪಟ್ಟಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.