ADVERTISEMENT

ಮೀಸಲಾತಿ ಶೇ 50ಕ್ಕೆ ಮಿತಿಗೊಳಿಸಿ: ಅಹಿಂಸಾ ಸಂಸ್ಥೆ

​ಪ್ರಜಾವಾಣಿ ವಾರ್ತೆ
Published 20 ಆಗಸ್ಟ್ 2025, 4:48 IST
Last Updated 20 ಆಗಸ್ಟ್ 2025, 4:48 IST
<div class="paragraphs"><p>ಮೀಸಲಾತಿ(ಸಾಂಕೇತಿಕ ಚಿತ್ರ)</p></div>

ಮೀಸಲಾತಿ(ಸಾಂಕೇತಿಕ ಚಿತ್ರ)

   

ಬೆಂಗಳೂರು: ರಾಜ್ಯದಲ್ಲಿ ಮೀಸಲಾತಿ ಪ್ರಮಾಣವನ್ನು ಶೇಕಡ 50ಕ್ಕೆ ಮಿತಿಗೊಳಿಸಬೇಕು. ಆದರೆ, ರಾಜ್ಯ ಸರ್ಕಾರ ಈ ಪ್ರಮಾಣವನ್ನು ಶೇ 56ಕ್ಕೆ ಹೆಚ್ಚಿಸಿರುವುದು ಅವೈಜ್ಞಾನಿಕವಾಗಿದೆ ಎಂದು ಅಹಿಂಸಾ ಸಂಸ್ಥೆ ತಿಳಿಸಿದೆ. 

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸ್ಥೆಯ ಎಂ. ನಾಗರಾಜ್, ‘ರಾಜ್ಯ ಸರ್ಕಾರ 2023ರಲ್ಲಿ ಪರಿಶಿಷ್ಟ ಜಾತಿ ಮೀಸಲಾತಿ ಪ್ರಮಾಣವನ್ನು ಶೇ 15 ರಿಂದ ಶೇ 17ಕ್ಕೆ ಹೆಚ್ಚಿಸಿರುವುದು ಅಸಾಂವಿಧಾನಿಕವಾಗಿದೆ. ಇತ್ತೀಚೆಗೆ ಕರ್ನಾಟಕ ಆಡಳಿತ ನ್ಯಾಯ ಮಂಡಳಿಯು ರಾಜ್ಯ ಸರ್ಕಾರವು ಒಟ್ಟು ಮೀಸಲಾತಿ ಪ್ರಮಾಣವನ್ನು ಶೇ 56ಕ್ಕೆ ಹೆಚ್ಚಿಸಿದ್ದ ಆದೇಶವನ್ನು ರದ್ದುಗೊಳಿಸಿ, ಶೇ 50ಕ್ಕೆ ಮಿತಿಗೊಳಿಸಬೇಕೆಂದು ಆದೇಶಿಸಿದೆ. ಹೀಗಾಗಿ ಸರ್ಕಾರ ಓಲೈಕೆಗಾಗಿ ಅವೈಜ್ಞಾನಿಕ ಕ್ರಮಗಳಿಗೆ ಮುಂದಾಗಬಾರದು’ ಎಂದು ಒತ್ತಾಯಿಸಿದರು. 

ADVERTISEMENT

‘ನಾಗಮೋಹನದಾಸ್‌ ಆಯೋಗವು ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಪ್ರಮಾಣ ಹಂಚಿಕೆ ಮಾಡುವ ಸಂದರ್ಭದಲ್ಲಿ ಒಟ್ಟು ಮೀಸ ಲಾತಿಯ ಪ್ರಮಾಣವನ್ನು ಶೇ 50ಕ್ಕೆ ಮಿತಿಗೊಳಿಸಬೇಕು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.