ADVERTISEMENT

ಒಳ ಮೀಸಲಾತಿ ಅಳವಡಿಸಿ ನೇಮಕಾತಿಗೆ ಡಿಪಿಎಆರ್ ಸೂಚನೆ

​ಪ್ರಜಾವಾಣಿ ವಾರ್ತೆ
Published 11 ಸೆಪ್ಟೆಂಬರ್ 2025, 15:46 IST
Last Updated 11 ಸೆಪ್ಟೆಂಬರ್ 2025, 15:46 IST
<div class="paragraphs"><p>ಮೀಸಲಾತಿ(ಸಾಂಕೇತಿಕ ಚಿತ್ರ)</p></div>

ಮೀಸಲಾತಿ(ಸಾಂಕೇತಿಕ ಚಿತ್ರ)

   

ಬೆಂಗಳೂರು: ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಅಳವಡಿಸಿಕೊಂಡು ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿ ಪ್ರಕ್ರಿಯೆ ಆರಂಭಿಸುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಡಿಪಿಎಆರ್) ಸೂಚನೆ ನೀಡಿದೆ.

ಒಳ ಮೀಸಲಾತಿ ಜಾರಿಗೊಳಿಸುವ ಸಂಬಂಧ ಶಿಫಾರಸು ಮಾಡಲು ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌. ನಾಗಮೋಹನದಾಸ್‌ ಅಧ್ಯಕ್ಷತೆಯಲ್ಲಿ ಆಯೋಗ ರಚಿಸಿದ ಕಾರಣ ಸರ್ಕಾರಿ ಹುದ್ದೆಗಳಿಗೆ ಹೊಸತಾಗಿ ನೇರ ನೇಮಕಾತಿ ಪ್ರಕ್ರಿಯೆಗೆ ತಡೆ ನೀಡಲಾಗಿತ್ತು.

ADVERTISEMENT

ಆಯೋಗ ನೀಡಿದ್ದ ವರದಿಯನ್ನು ಕೆಲವು ಬದಲಾವಣೆ ಮಾಡಿಕೊಂಡು ಅಂಗೀಕರಿಸಿದ ಸರ್ಕಾರ, ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ 101 ಜಾತಿಗಳಿಗೆ ಲಭ್ಯವಿದ್ದ ಶೇ 17 ಮೀಸಲಾತಿಯನ್ನು ಪ್ರವರ್ಗವಾರು ವಿಂಗಡಿಸಿ ಹಂಚಿಕೆ ಮಾಡಿದೆ. ಅಲ್ಲದೆ, ಒಳ ಮೀಸಲಾತಿ ನಿಗದಿಪಡಿಸಿ ‘ಪರಿಷ್ಕೃತ ಮೀಸಲಾತಿ ರೋಸ್ಟರ್‌’ ಅನ್ನು ಈಗಾಗಲೇ ಪ್ರಕಟಿಸಿದೆ.

‘ಒಳ ಮೀಸಲಾತಿ ಜಾರಿಗೆ ಬಂದಿರುವುದರಿಂದ ಎಲ್ಲ ಇಲಾಖೆಗಳು ಮತ್ತು ನೇಮಕಾತಿ ಪ್ರಾಧಿಕಾರಗಳು ನೇರ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಬಹುದು’ ಎಂದು ಆದೇಶದಲ್ಲಿ ಡಿಪಿಎಆರ್‌ ಕಾರ್ಯದರ್ಶಿ ಕೆ.ಜಿ. ಜಗದೀಶ್‌ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.