ಬೆಂಗಳೂರು: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ಎಲ್ಲ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾರ್ಚ್ 1ರಂದು ಲಿಖಿತ ಪರೀಕ್ಷೆ ನಡೆಸುತ್ತಿದ್ದು, ಎಲ್ಲ ಕೇಂದ್ರಗಳನ್ನೂ ಸಜ್ಜುಗೊಳಿಸಲಾಗಿದೆ.
ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕಿತ್ತೂರು ರಾಣಿ ಚನ್ನಮ್ಮ, ಏಕಲವ್ಯ ಮಾದರಿ ಶಾಲೆ, ಅಟಲ್ ಬಿಹಾರಿ ವಾಜಪೇಯಿ ಶಾಲೆ, ಇಂದಿರಾಗಾಂಧಿ, ಅಂಬೇಡ್ಕರ್, ಮಾಸ್ತಿ ವೆಂಕಟೇಶ ಅಯ್ಯಂಗಾರ್ ವಸತಿ ಶಾಲೆಗಳ ಪ್ರವೇಶಕ್ಕೆ 100 ಅಂಕಗಳಿಗೆ ಪರೀಕ್ಷೆ ನಡೆಯಲಿದೆ ಎಂದು ಪ್ರಾಧಿಕಾರದ ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ಹೇಳಿದ್ದಾರೆ.
2.31 ಲಕ್ಷ ಮಕ್ಕಳು ಪರೀಕ್ಷೆ ಬರೆಯಲು ಅರ್ಜಿ ಸಲ್ಲಿಸಿದ್ದು, 629 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಬಹುತೇಕ ಎಲ್ಲ ತಾಲೂಕು ಕೇಂದ್ರಗಳಲ್ಲಿ ಕೂಡ ಪರೀಕ್ಷಾ ಕೇಂದ್ರ ತೆರೆಯಲಾಗಿದೆ. ಐದನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಈ ಪರೀಕ್ಷೆ ಬರೆಯಲು ಅರ್ಹತೆ ಪಡೆದಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.