ADVERTISEMENT

ವಿಧಾನಸಭೆ: ಒಳಮೀಸಲಾತಿ ಮಸೂದೆಗೆ ಅಂಗೀಕಾರ

​ಪ್ರಜಾವಾಣಿ ವಾರ್ತೆ
Published 17 ಡಿಸೆಂಬರ್ 2025, 16:10 IST
Last Updated 17 ಡಿಸೆಂಬರ್ 2025, 16:10 IST
<div class="paragraphs"><p>ಬೆಳಗಾವಿ ಅಧಿವೇಶನ (ಪ್ರಾತಿನಿಧಿಕ ಚಿತ್ರ)</p></div>

ಬೆಳಗಾವಿ ಅಧಿವೇಶನ (ಪ್ರಾತಿನಿಧಿಕ ಚಿತ್ರ)

   

ಸುವರ್ಣ ವಿಧಾನಸೌಧ (ಬೆಳಗಾವಿ): ಪರಿಶಿಷ್ಟಜಾತಿಯವರಿಗೆ ಒಳಮೀಸಲಾತಿ ಕಲ್ಪಿಸುವ ಸರ್ಕಾರಿ ಆದೇಶಗಳು ಮತ್ತು ಸುತ್ತೋಲೆಗಳಿಗೆ ಕಾನೂನಾತ್ಮಕ ರಕ್ಷಣೆ ನೀಡುವ ಉದ್ದೇಶದ ‘ಕರ್ನಾಟಕ ಅನುಸೂಚಿತ ಜಾತಿಗಳ (ಉಪವರ್ಗೀಕರಣ) ಮಸೂದೆ’ಗೆ ವಿಧಾನಸಭೆ ಅಂಗೀಕಾರ ನೀಡಿದೆ.

ಪರಿಶಿಷ್ಟ ಜಾತಿಗೆ ಲಭ್ಯ ಇರುವ ಶೇ 17 ರಷ್ಟು ಮೀಸಲಾತಿಯಲ್ಲಿ ಪ್ರವರ್ಗ–ಎ(16 ಜಾತಿಗಳು) ಶೇ 6, ಪ್ರವರ್ಗ–ಬಿ (19 ಜಾತಿಗಳು) ಶೇ 6, ಪ್ರವರ್ಗ–ಸಿ(63 ಜಾತಿಗಳು) ಶೇ 5, ಒಟ್ಟು 98 ಜಾತಿಗಳಿಗೆ ಒಳ ಮೀಸಲು ಹಂಚಿಕೆಯಾಗಲಿದೆ. ಈ ಮಸೂದೆಗೆ ಹಸಿರು ನಿಶಾನೆ ಸಿಗುತ್ತದೆ ಎಂದು ಕಾದಿದ್ದ ಬಹುದೊಡ್ಡ ಸಮುದಾಯ ನಿರೀಕ್ಷೆ ಈಗ ಫಲ ಕಂಡಿದೆ. 

ADVERTISEMENT

ಒಳಮೀಸಲಾತಿ ಕಾಯ್ದೆ 2025 ರ ಆಗಸ್ಟ್‌ 25 ರಿಂದ ಅನ್ವಯವಾಗಲಿದೆ ಎಂದು ಮಸೂದೆಯಲ್ಲಿ ಪ್ರಸ್ತಾಪಿಸಲಾಗಿದೆ. ಸಮಾಜ ಕಲ್ಯಾಣ ಸಚಿವ ಎಚ್‌.ಸಿ.ಮಹದೇವಪ್ಪ ಅವರು ಮಸೂದೆ ಮಂಡಿಸಿದರು. ಯಾವುದೇ ಚರ್ಚೆ ಇಲ್ಲದೇ ಮಸೂದೆ ಅಂಗೀಕಾರ ಪಡೆಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.