ಬೆಂಗಳೂರು: ರಾಜ್ಯದ ಶಾಲೆಗಳಲ್ಲಿ ಶುಕ್ರವಾರ ಪ್ರಾರಂಭೋತ್ಸವ ಹಮ್ಮಿಕೊಳ್ಳಲಾಗಿದ್ದು, ಮಧ್ಯಾಹ್ನದ ಬಿಸಿಯೂಟಕ್ಕೆ ಸಿಹಿ ನೀಡಲಾಗುತ್ತಿದೆ.
ಶಾಲೆಗಳನ್ನು ಬಾಳೆಕಂದು, ತಳಿರು ತೋರಣಗಳಿಂದ ಶೃಂಗರಿಸಲಾಗಿದೆ. ಅಂಗಳದಲ್ಲಿ ರಂಗೋಲಿ ಬಿಡಿಸಿ ಹಬ್ಬದ ವಾತಾವರಣ ನಿರ್ಮಿಸಲಾಗಿದೆ. ಶಾಲೆಗೆ ಬರುವ ಮಕ್ಕಳಿಗೆ ಪಠ್ಯಪುಸ್ತಕ, ಎರಡು ಜೊತೆ ಸಮವಸ್ತ್ರ ವಿತರಿಸಲಾಗುತ್ತಿದೆ. ಬಾರದ ಮಕ್ಕಳನ್ನು ಅವರ ಮನೆಗಳಿಗೆ ತೆರಳಿ ಕರೆತರಲು ಶಿಕ್ಷಕರ ತಂಡಗಳು ಸಜ್ಜಾಗಿವೆ.
ಶೂ ಖರೀದಿಗೆ ₹121 ಕೋಟಿ ಬಿಡುಗಡೆ:
ಶೂ ಖರೀದಿಸಲು ₹121 ಕೋಟಿ ಬಿಡುಗಡೆ ಮಾಡಲಾಗಿದೆ. ಪ್ರತಿ ವಿದ್ಯಾರ್ಥಿಗಳಿಗೆ ಒಂದು ಜೊತೆ ಕಪ್ಪು ಬಣ್ಣದ ಶೂ, ಎರಡು ಜೊತೆ ಸಾಕ್ಸ್ ನೀಡಲಾಗುತ್ತದೆ. ಆಯಾ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ, ಮುಖ್ಯ ಶಿಕ್ಷಕರನ್ನು ಒಳಗೊಂಡ ಐವರ ಸಮಿತಿಗೆ ಶೂ ಖರೀದಿಯ ಹೊಣೆಯನ್ನು ನೀಡಲಾಗಿದೆ. ಒಂದರಿಂದ ಐದನೇ ತರಗತಿ ಮಕ್ಕಳಿಗೆ ತಲಾ ₹265, ಆರರಿಂದ ಎಂಟನೇ ತರಗತಿ ₹295 ಹಾಗೂ ಒಂಬತ್ತರಿಂದ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ₹325 ನಿಗದಿ ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.