ADVERTISEMENT

ದ್ವಿತೀಯ ಪಿಯುಸಿ: ಜ.19ರಿಂದ 2ನೇ ಪೂರ್ವಸಿದ್ಧತಾ ಪರೀಕ್ಷೆ

​ಪ್ರಜಾವಾಣಿ ವಾರ್ತೆ
Published 17 ಜನವರಿ 2026, 15:34 IST
Last Updated 17 ಜನವರಿ 2026, 15:34 IST
ಕೋಲಾರದ ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರವೊಂದರಲ್ಲಿ ವಿದ್ಯಾರ್ಥಿಗಳು ಶುಕ್ರವಾರ ಪರೀಕ್ಷೆ ಬರೆಯಲು ಸಿದ್ಧರಾಗಿ ಕುಳಿತಿದ್ದರು
ಕೋಲಾರದ ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರವೊಂದರಲ್ಲಿ ವಿದ್ಯಾರ್ಥಿಗಳು ಶುಕ್ರವಾರ ಪರೀಕ್ಷೆ ಬರೆಯಲು ಸಿದ್ಧರಾಗಿ ಕುಳಿತಿದ್ದರು   

ಬೆಂಗಳೂರು: ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಎರಡನೇ ಪೂರ್ವಸಿದ್ಧತಾ ಪರೀಕ್ಷೆ ಜ.19ರಿಂದ ಆರಂಭವಾಗಲಿದ್ದು, ಫೆ.2ರವರೆಗೆ ನಡೆಯಲಿವೆ. 

ಜ.2ರಿಂದ 17ರವರೆಗೆ ಮೊದಲ ಪೂರ್ವಸಿದ್ಧತಾ ಪರೀಕ್ಷೆ ನಡೆದಿತ್ತು. ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೇಳೆ ಕೆಲ ವಿಷಯಗಳ ಪ್ರಶ್ನೆಪತ್ರಿಕೆಗಳು ಸೋರಿಕೆಯಾಗಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದವು. ಹಾಗಾಗಿ, ಪಿಯು ಎರಡನೇ ಪರೀಕ್ಷೆಯನ್ನು ಕಟ್ಟುನಿಟಾಗಿ ನಡೆಸಲು ಪದವಿಪೂರ್ವ ಶಿಕ್ಷಣ ನಿರ್ದೇಶನಾಲಯ ಸೂಚನೆ ನೀಡಿದೆ. 

ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್‌ ಮಾಡುವ ವಿದ್ಯಾರ್ಥಿಗಳು, ಸಾರ್ವಜನಿಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಪರೀಕ್ಷಾ ಕೊಠಡಿಯ ಒಳಗೆ ಮೊಬೈಲ್‌ ಫೋನ್‌ ಬಳಸುವಂತಿಲ್ಲ. ಆಯಾ ವಿಷಯದ ಪ್ರಶ್ನೆಪತ್ರಿಕೆಗಳನ್ನು ಒಂದು ದಿನ ಮೊದಲಷ್ಟೇ ಮುದ್ರಿಸಿಕೊಳ್ಳಬೇಕು. ಲೋಪ ಎಸಗುವ ಕಾಲೇಜುಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಆಯಾ ಜಿಲ್ಲೆಯ ಪಿಯು ಉಪನಿರ್ದೇಶಕರನ್ನೇ ಹೊಣೆ ಮಾಡಲಾಗುವುದು ಎಂದು ಎಸ್‌.ಭರತ್‌ ಹೇಳಿದ್ದಾರೆ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.