ADVERTISEMENT

ರಾಜ್ಯದಲ್ಲೂ ಜನಸಂಖ್ಯೆ ನಿಯಂತ್ರಣಕ್ಕೆ ಹೊಸ ಜನಸಂಖ್ಯಾ ನೀತಿ ತರಬೇಕು: ಸಿ.ಟಿ. ರವಿ

​ಪ್ರಜಾವಾಣಿ ವಾರ್ತೆ
Published 13 ಜುಲೈ 2021, 8:20 IST
Last Updated 13 ಜುಲೈ 2021, 8:20 IST
   

ಬೆಂಗಳೂರು: ಹೆಚ್ಚುತ್ತಿರುವ ಜನಸಂಖ್ಯೆಯನ್ನು ನಿಯಂತ್ರಿಸಲು ಕರ್ನಾಟಕವು ಸಹ ಅಸ್ಸಾಂ ಮತ್ತು ಉತ್ತರ ಪ್ರದೇಶದ ಮಾದರಿಯಲ್ಲಿ ಹೊಸ ಜನಸಂಖ್ಯಾ ನೀತಿಯನ್ನು ತರಲು ಇದು ಅತ್ಯುತ್ತಮ ಸಮಯ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಟ್ವೀಟ್ ಮಾಡಿದ್ದಾರೆ.

ಸೀಮಿತ ನೈಸರ್ಗಿಕ ಸಂಪನ್ಮೂಲಗಳು ಲಭ್ಯವಿರುವುದರಿಂದ, ಜನಸಂಖ್ಯೆಯ ಸ್ಫೋಟ ಸಂಭವಿಸಿದಲ್ಲಿ ಪ್ರತಿಯೊಬ್ಬ ನಾಗರಿಕನ ಅಗತ್ಯಗಳನ್ನು ಪೂರೈಸುವುದು ಕಷ್ಟವಾಗುತ್ತದೆ ಎಂದು ಸಿ.ಟಿ ರವಿ ಅಭಿಪ್ರಾಯಪಟ್ಟಿದ್ದಾರೆ.

ಉತ್ತರ ಪ್ರದೇಶ ರಾಜ್ಯದಲ್ಲಿ ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಪಡೆಯುವವರು ಸರ್ಕಾರಿ ಉದ್ಯೋಗಕ್ಕೆ ಅರ್ಜಿ ಸಲ್ಲಿಸುವಂತಿಲ್ಲ. ಅಂತಹವರಿಗೆ ಸರ್ಕಾರಿ ಸೌಲಭ್ಯ ಸಿಗುವುದಿಲ್ಲ ಎಂಬ ಕಠಿಣ ಷರತ್ತುಗಳನ್ನಾಧರಿಸಿ ಜನಸಂಖ್ಯಾ ನೀತಿ ಜಾರಿಗೆ ಮುಂದಾಗಿದ್ದು, ಕರಡನ್ನು ಜನರ ಚರ್ಚೆಗೆ ನೀಡಲಾಗಿದೆ.

ADVERTISEMENT

ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, 'ನಾವು ಈ ಬಗ್ಗೆ ಬಹಳ ಗಂಭೀರವಾಗಿ ಯೋಚಿಸಬೇಕು. ಕರ್ನಾಟಕದ ಜನಸಂಖ್ಯೆ 7 ಕೋಟಿ ದಾಟಿದೆ. ಉತ್ತರ ಪ್ರದೇಶ ಮತ್ತು ಅಸ್ಸಾಂ ಸರ್ಕಾರ ಯಾವ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆಯೀ ಆ ಬಗ್ಗೆ ಕರ್ನಾಟಕ ಕೂಡ ಅಧ್ಯಯನ ನಡೆಸಿ ಚರ್ಚಿಸಲಿ’ ಎಂದು ಇಂಡಿಯಾ ಟುಡೇಗೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.