ವಿಧಾನಸೌಧ (ಸಾಂದರ್ಭಿಕ ಚಿತ್ರ)
ನವದೆಹಲಿ: ಬಾಹ್ಯಾಕಾಶ ತಂತ್ರಜ್ಞಾನಕ್ಕೆ ನೆರವು ನೀಡುವ ಸಂಬಂಧ ಕರ್ನಾಟಕ ಸರ್ಕಾರ ಹಾಗೂ ಭಾರತೀಯ ಬಾಹ್ಯಾಕಾಶ ಉತ್ತೇಜನ ಕೇಂದ್ರ ಒಪ್ಪಂದಕ್ಕೆ ಸಹಿ ಹಾಕಿವೆ.
ಬಾಹ್ಯಾಕಾಶ ತಂತ್ರಜ್ಞಾನಕ್ಕಾಗಿ ಉತ್ಕೃಷ್ಟತಾ ಕೇಂದ್ರದ ಚಟುವಟಿಕೆಗಳಿಗೆ ಬೆಂಬಲ ನೀಡಲು ಮತ್ತು ಕರ್ನಾಟಕದಲ್ಲಿ ಬಾಹ್ಯಾಕಾಶ ಉತ್ಪಾದನಾ ಕೇಂದ್ರ ಸ್ಥಾಪಿಸಲು ಈ ಒಪ್ಪಂದ ಮಾಡಿಕೊಳ್ಳಲಾಗಿದೆ. ಕೇಂದ್ರ ಎಲ್ಲಿ ಸ್ಥಾಪಿಸಬೇಕು ಎಂಬುದನ್ನು ರಾಜ್ಯ ಸರ್ಕಾರ ನಿರ್ಧರಿಸಲಿದೆ.
ಕರ್ನಾಟಕದಲ್ಲಿ ಬಾಹ್ಯಾಕಾಶ ಉತ್ಪಾದನಾ ಕ್ಲಸ್ಟರ್‌ನಲ್ಲಿ ಸಾಮಾನ್ಯ ತಾಂತ್ರಿಕ ವ್ಯವಸ್ಥೆ ಸ್ಥಾಪಿಸಲು ರಾಜ್ಯ ಸರ್ಕಾರವು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದೆ. ಭಾರತೀಯ ಬಾಹ್ಯಾಕಾಶ ಉತ್ತೇಜನ ಕೇಂದ್ರವು ಬೆಂಗಳೂರಿನ 50 ಕ್ಕೂ ಹೆಚ್ಚು ಬಾಹ್ಯಾಕಾಶ ನವೋದ್ಯಮಗಳಿಗೆ ನೆರವು ನೀಡಿದೆ. ಕೇಂದ್ರದ ಮೂಲ ನಿಧಿ ಯೋಜನೆಯಡಿ 5 ನವೋದ್ಯಮಗಳನ್ನು ಆಯ್ಕೆ ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.