ADVERTISEMENT

ಬಹಿಷ್ಕಾರ ಶಿಕ್ಷಾರ್ಹ ಅಪರಾಧ: ಮಸೂದೆ ಸಿದ್ಧಪಡಿಸಿದ ರಾಜ್ಯ ಸರ್ಕಾರ

ಮಸೂದೆ ಸಿದ್ಧಪಡಿಸಿದ ರಾಜ್ಯ ಸರ್ಕಾರ ಅಧಿವೇಶನದಲ್ಲಿ ಮಂಡನೆ ಸಂಭವ

ಚಂದ್ರಹಾಸ ಹಿರೇಮಳಲಿ
Published 3 ಡಿಸೆಂಬರ್ 2025, 23:30 IST
Last Updated 3 ಡಿಸೆಂಬರ್ 2025, 23:30 IST
<div class="paragraphs"><p>ಕಲೆ: ಸಂತೋಷ್ ಸಸಿಹಿತ್ಲು</p></div>

ಕಲೆ: ಸಂತೋಷ್ ಸಸಿಹಿತ್ಲು

   

ಬೆಂಗಳೂರು: ಯಾವುದೇ ವ್ಯಕ್ತಿ, ಕುಟುಂಬ ಅಥವಾ ಕುಟುಂಬದ ಸದಸ್ಯರನ್ನು ಸಾಮಾಜಿಕವಾಗಿ ಬಹಿಷ್ಕರಿಸಿ ದರೆ, ಅಂತಹ ಹೀನ ಕ್ರಮ ಎಸಗಿದವರು ₹ 1 ಲಕ್ಷ ದಂಡ ಹಾಗೂ ಮೂರು ವರ್ಷದವರೆಗಿನ ಜೈಲು ಶಿಕ್ಷೆಗೆ
ಗುರಿಯಾಗಬೇಕಾಗುತ್ತದೆ. 

ಸಾಮಾಜಿಕ ಬಹಿಷ್ಕಾರವನ್ನು ನಿಷೇಧಿಸಲು ಮುಂದಾಗಿರುವ ರಾಜ್ಯ ಸರ್ಕಾರ, ಬಹಿಷ್ಕರಿಸುವ ತೀರ್ಮಾನ ತೆಗೆದುಕೊಂಡವರು, ಬಹಿಷ್ಕಾರ ಹಾಕುವ ಬಗ್ಗೆ ಸಭೆ–ಪಂಚಾಯ್ತಿ ನಡೆಸಿದವರು ಅಪರಾಧಿಗಳು ಎಂದು ಶಿಕ್ಷೆಗೆ ಗುರಿ ಮಾಡುವ ಮಹತ್ವದ ಹೆಜ್ಜೆಯನ್ನು ಇಟ್ಟಿದೆ. 

ADVERTISEMENT

ಈ ಉದ್ದೇಶಕ್ಕಾಗಿ, ‘ಕರ್ನಾಟಕ ಸಾಮಾಜಿಕ ಬಹಿಷ್ಕಾರದಿಂದ ಜನರ ರಕ್ಷಣೆ (ತಡೆ, ನಿಷೇಧ ಮತ್ತು ಪರಿಹಾರ) ಮಸೂದೆ-2025’ಯನ್ನು ಸಿದ್ಧಪಡಿಸ ಲಾಗಿದೆ. ಬೆಳಗಾವಿಯಲ್ಲಿ ಡಿ.8ರಿಂದ ಆರಂಭವಾಗುವ ಚಳಿಗಾಲದ ಅಧಿವೇಶನದಲ್ಲಿ ಮಸೂದೆ ಮಂಡಿಸುವ ತಯಾರಿಯನ್ನು ಸರ್ಕಾರ ನಡೆಸಿದೆ.

ಬಹಿಷ್ಕಾರಕ್ಕೆ ಸಹಾಯ, ಪ್ರಚೋದನೆ ಶಿಕ್ಷಾರ್ಹ ಅಪರಾಧವಾಗಲಿದೆ. ಅದಕ್ಕೂ ಮೂರು ವರ್ಷಗಳವರೆಗೆ ಜೈಲು, ₹1 ಲಕ್ಷ ದಂಡ ಅಥವಾ ಎರಡನ್ನೂ ವಿಧಿಸಲು ಅವಕಾಶ ಇದೆ. ಸಭೆಯಲ್ಲಿ ಹಾಜರಿಲ್ಲ ದಿದ್ದರೂ ಬಹಿಷ್ಕಾರಕ್ಕೆ ಒತ್ತಡ ಹೇರುವ ಮೂಲಕ ನಿರ್ಧಾರಕ್ಕೆ ಕಾರಣರಾದವರು, ಬಹಿಷ್ಕಾರದ ಪರವಾಗಿ ಮತ ಹಾಕಿದವರು ಅಥವಾ ಚರ್ಚೆಯಲ್ಲಿ ಪಾಲ್ಗೊಂಡವರನ್ನೂ ಅಪರಾಧಿಗಳೆಂದು ನಿರ್ಧರಿಸಲಾಗುತ್ತದೆ. ಈ ಕುರಿತು ಸಭೆ, ಜಮಾವಣೆ, ಸಮಾವೇಶ ನಡೆಸುವುದು ಅಕ್ರಮ ಎಂದು ಮಸೂದೆ ಉಲ್ಲೇಖಿಸಿದೆ.

ಬಹಿಷ್ಕಾರಕ್ಕೆ ಒಳಗಾಗುವವರು ಠಾಣೆ ಅಥವಾ ನ್ಯಾಯಾಧೀಶರಿಗೆ ನೇರವಾಗಿ ದೂರು ಸಲ್ಲಿಸ ಬಹುದು.

ಪ್ರಥಮ ದರ್ಜೆ ನ್ಯಾಯಾಧೀಶರಿಗೆ ವಿಚಾರಣೆಯ ಅಧಿಕಾರ ನೀಡಲಾಗಿದೆ. ನೇರವಾಗಿ ಸಲ್ಲಿಕೆಯಾದ ದೂರಿನ ತನಿಖೆ ನಡೆಸುವಂತೆ ನ್ಯಾಯಾಧೀಶರು ಆದೇಶಿಸಬಹುದು. ಪೀಡಿತರಿಗೆ ಸಹಾಯ ಒದಗಿಸಲು ಸೂಚಿಸಬಹುದು. ದಂಡದ ಮೊತ್ತವನ್ನು ಪೀಡಿತರಿಗೆ ಪರಿಹಾರವಾಗಿ ನೀಡಲು ನಿರ್ದೇಶನ ನೀಡಬಹುದು.

ಸಾಮಾಜಿಕ ಬಹಿಷ್ಕಾರದಂತಹ ನಿರ್ಧಾರ ತೆಗೆದುಕೊಳ್ಳಲು ನಡೆಸುವ ಸಭೆಗಳ ಕುರಿತು ಮಾಹಿತಿ ಬಂದರೆ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ನಿಷೇಧಿಸುವ ಆದೇಶ ಹೊರಡಿಸಬಹುದು. ಗ್ರೂಪ್–ಎ ಅಧಿಕಾರಿಗಳನ್ನು ಸಾಮಾಜಿಕ ಬಹಿಷ್ಕಾರ ತಡೆ ಅಧಿಕಾರಿಗಳನ್ನಾಗಿ ನಿಯೋಜಿಸಬಹುದು. ಈ ಅಧಿಕಾರಿಗಳು ಕಾಯ್ದೆಯ ಜಾರಿ, ಪ್ರಕರಣ ಪತ್ತೆ, ಮತ್ತು ನ್ಯಾಯಾಲಯಕ್ಕೆ ಸಹಕಾರದ ನೀಡುವ ಹೊಣೆಗಾರಿಕೆ ನಿಭಾಯಿಸಲಿದ್ದಾರೆ. ಪರಿಸ್ಥಿತಿಗೆ ಅನುಗುಣವಾಗಿ ಪೊಲೀಸರಿಗೆ ಸಲಹೆ, ಸೂಚನೆ ನೀಡಬಹುದು. 

‘ಸಾಮಾಜಿಕ ಸುಧಾರಣೆ, ಜನ ಸಾಮಾನ್ಯರ ಕಲ್ಯಾಣದ ದೃಷ್ಟಿಯಿಂದ ಸಾಮಾಜಿಕ ಬಹಿಷ್ಕಾರವನ್ನು ನಿಷೇಧಿಸುವುದು ಅಗತ್ಯವಾಗಿದೆ. ಪ್ರತಿಯೊಬ್ಬ ವ್ಯಕ್ತಿಯ ಘನತೆಗೆ ಭಾರತ ಸಂವಿಧಾನದಲ್ಲಿ ಆದ್ಯತೆ ನೀಡಲಾಗಿದ್ದು, ಸಮಾಜದಲ್ಲಿ ವ್ಯಕ್ತಿ ಅಥವಾ ವ್ಯಕ್ತಿಗಳ ಗುಂಪಿನ ಮೇಲೆ ಸಾಮಾಜಿಕ ಬಹಿಷ್ಕಾರ ಹೇರುವುದು ಸಂವಿಧಾನದ ಭಾಗ–3ರ ಅಡಿ ನೀಡಲಾದ ಮೂಲಭೂತ ಹಕ್ಕುಗಳ ಉಲ್ಲಂಘನೆ. ರಾಜ್ಯದ ವಿವಿಧ ಭಾಗಗಳಲ್ಲಿ ಸಾಮಾಜಿಕ ಬಹಿಷ್ಕಾರದ ಅಮಾನುಷ ಪದ್ಧತಿ ಇನ್ನೂ ಮುಂದುವರಿದಿದೆ. ಅದರ ನಿರ್ಮೂಲನೆಗೆ ಮಸೂದೆ ಸಿದ್ಧಪಡಿಸಲಾಗಿದೆ’ ಎನ್ನುತ್ತಾರೆ ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ.ಪಾಟೀಲ. 

ಸಾಮಾಜಿಕ ಬಹಿಷ್ಕಾರವು ಮಾನವ ಘನತೆಗೆ ಧಕ್ಕೆ ತರುವ ಕ್ರಿಯೆ. ಈಗಿರುವ ಕಾನೂನುಗಳು ಬಹಿಷ್ಕಾರ ತಡೆಗೆ ಪರಿಣಾಮಕಾರಿಯಾಗಿಲ್ಲ. ಹಾಗಾಗಿ, ಹೊಸ ಕಾಯ್ದೆ‌ ಜಾರಿಗೆ ನಿರ್ಧರಿಸಲಾಗಿದೆ
ಎಚ್.ಕೆ.ಪಾಟೀಲ ಸಂಸದೀಯ ವ್ಯವಹಾರಗಳ ಸಚಿವ 
ಯಾವ್ಯಾವುದಕ್ಕೆ ನಿಷೇಧ?
  • ಗ್ರಾಮ ಅಥವಾ ಸಮುದಾಯದಿಂದ ಹೊರ ಹಾಕುವುದು

  • ಧಾರ್ಮಿಕ, ಸಾರ್ವಜನಿಕ ಸ್ಥಳಗಳ ಬಳಕೆಗೆ ನಿರ್ಬಂಧ ವಿಧಿಸುವುದು

  • ಪೂಜಾ ಸ್ಥಳಗಳ ಪ್ರವೇಶಕ್ಕೆ ಅಡ್ಡಿ ಮಾಡುವುದು

  • ಸಾಮಾಜಿಕ–ಧಾರ್ಮಿಕ ಆಚರಣೆಗಳಲ್ಲಿ ಪಾಲ್ಗೊಳ್ಳುವುದಕ್ಕೆ ತಡೆಯೊಡ್ಡುವುದು 

  • ವ್ಯವಹಾರ ಅಥವಾ ಉದ್ಯೋಗ ತಿರಸ್ಕಾರ ಮಾಡುವುದು

  • ಶಾಲೆ, ಆಸ್ಪತ್ರೆ, ಸಮುದಾಯ ಭವನಗಳ ಪ್ರವೇಶಕ್ಕೆ ತಡೆಯೊಡ್ಡುವುದು 

  • ಸೇವೆಗಳು, ಅವಕಾಶಗಳನ್ನು ನಿರಾಕರಿಸುವುದು

  • ಮದುವೆ, ಅಂತ್ಯಕ್ರಿಯೆಗಳಲ್ಲಿ ಭಾಗವಹಿಸು ವುದಕ್ಕೆ ತಡೆಯೊಡ್ಡುವುದು 

  • ಸಂಬಂಧ ಕಡಿತಗೊಳಿಸಲು ಪ್ರಚೋದನೆ ನೀಡುವುದು

  • ಲಿಂಗತ್ವದ ಆಧಾರದ ಮೇಲೆ ಭೇದ ಮಾಡುವುದು

  • ವ್ಯಾಪಾರ, ಸಾಮಾಜಿಕ ಸಂಬಂಧಗಳಿಗೆ ತಡೆಯೊಡ್ಡುವುದು 

  • ಮಕ್ಕಳನ್ನು ಒಟ್ಟಿಗೆ ಆಡಲು ಅಡ್ಡಿ ಪಡಿಸುವುದು

  • ಮಾನವ ಹಕ್ಕುಗಳನ್ನು ನಿರಾಕರಿಸುವುದು

  • ಬಟ್ಟೆ, ಭಾಷೆ, ಸಾಂಸ್ಕೃತಿಕ ಭೇದ ಎಸಗುವುದು

ಮೊದಲ ರಾಜ್ಯ ಮಹಾರಾಷ್ಟ್ರ
ಸಾಮಾಜಿಕ ಬಹಿಷ್ಕಾರ ನಿಷೇಧ ಕಾಯ್ದೆ ಜಾರಿಗೆ ತಂದ ಭಾರತದ ಮೊದಲ ರಾಜ್ಯ ಮಹಾರಾಷ್ಟ್ರ. ಬಹಿಷ್ಕಾರದ ಮೂಲಕ ದಲಿತರು ಮತ್ತು ಇತರ ಅಳಿವಿನ ಅಂಚಿನಲ್ಲಿರುವ ಸಮುದಾಯಗಳಿಗೆ ರಕ್ಷಣೆ ನೀಡಲು 2016ರಲ್ಲಿ ಕಾಯ್ದೆ ಜಾರಿಗೆ ತರಲಾಯಿತು. 2017ರ ಜುಲೈನಲ್ಲಿ ರಾಷ್ಟ್ರಪತಿ ಅನುಮೋದನೆ ದೊರೆಯಿತು. ಜಾತಿ, ಸಮುದಾಯ, ಧರ್ಮ, ಆಚರಣೆಗಳು ಅಥವಾ ವೈಯಕ್ತಿಕ ಜೀವನಶೈಲಿಯಂತಹ ಯಾವುದೇ ಆಧಾರದ ಮೇಲೆ ಒಬ್ಬ ವ್ಯಕ್ತಿ ಅಥವಾ ಗುಂಪನ್ನು ಬಹಿಷ್ಕರಿಸುವುದನ್ನು ಈ ಕಾಯ್ದೆ ನಿಷೇಧಿಸಿತ್ತು. ಇಂತಹ ಕೃತ್ಯ ಎಸಗುವ ಅಪರಾಧಿಗಳಿಗೆ ಏಳು ವರ್ಷ ಜೈಲು ಶಿಕ್ಷೆ, ₹5 ಲಕ್ಷ ದಂಡ ವಿಧಿಸಲು ಅವಕಾಶ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.