ADVERTISEMENT

ಎಸ್ಸೆಸ್ಸೆಲ್ಸಿ ಸಾಧಕ ಬಡ ವಿದ್ಯಾರ್ಥಿ ಮನೆಗೆ ಸಚಿವ ಸುರೇಶ್‌ ಕುಮಾರ್ ಭೇಟಿ

ಕಾಲೇಜು ಶಿಕ್ಷಣಕ್ಕೆ ವ್ಯವಸ್ಥೆ ಮಾಡುವ ಭರವಸೆ

​ಪ್ರಜಾವಾಣಿ ವಾರ್ತೆ
Published 11 ಆಗಸ್ಟ್ 2020, 8:30 IST
Last Updated 11 ಆಗಸ್ಟ್ 2020, 8:30 IST
ಮಹೇಶನಿಗೆ ಶಿಕ್ಷಣ ಇಲಾಖೆಯ ಪರವಾಗಿ ಅಭಿನಂದನೆ ಸಲ್ಲಿಸಿದ ಸಚಿವ ಸುರೇಶ್ ಕುಮಾರ್
ಮಹೇಶನಿಗೆ ಶಿಕ್ಷಣ ಇಲಾಖೆಯ ಪರವಾಗಿ ಅಭಿನಂದನೆ ಸಲ್ಲಿಸಿದ ಸಚಿವ ಸುರೇಶ್ ಕುಮಾರ್   

ಬೆಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 616 ಅಂಕಗಳನ್ನು ಗಳಿಸಿದ ಇಂದಿರಾನಗರದ ಜೀವನಭೀಮಾನಗರದ ಸರ್ಕಾರಿ ಕರ್ನಾಟಕ ಪಬ್ಲಿಕ್ ಶಾಲೆಯ (KPS) ವಿದ್ಯಾರ್ಥಿ ಮಹೇಶ ಅವರ ಮನೆಗೆ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಭೇಟಿ ನೀಡಿದ್ದಾರೆ.

ಈ ಕುರಿತು ಫೇಸ್‌ಬುಕ್‌ನಲ್ಲಿ ಬರಹ ಪ್ರಕಟಿಸಿರುವ ಸಚಿವರು, ‘ಮಹೇಶ ಯಾದಗಿರಿಯಿಂದ ಬೆಂಗಳೂರಿಗೆ ಗುಳೆ ಬಂದಿರುವ ಕುಟುಂಬಕ್ಕೆ ಸೇರಿದ ಬಾಲಕನಾಗಿದ್ದು, ಬಡತನದ ನಡುವೆಯೂ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ತೋರಿದ್ದಾನೆ. ಕಟ್ಟಡ ನಿರ್ಮಾಣ ಕಾರ್ಯದಲ್ಲಿ ಕೂಲಿ ಕೆಲಸ ಮಾಡಿಕೊಂಡೇ ವಿದ್ಯಾಭ್ಯಾಸವನ್ನು ಇದುವರೆಗೆ ಮುಗಿಸಿದ್ದಾನೆ. ಇಂದು ಅವನ ಮನೆಯೆಂದು ಕರೆಯಬಹುದಾದ ಪುಟ್ಟ ಗುಡಿಸಲಿಗೆ ಹೋಗಿದ್ದೆ. ಆ ಮನೆಯಲ್ಲಿ ಕುಳಿತುಕೊಳ್ಳಲೂ ಜಾಗವಿಲ್ಲ. ಮಹೇಶನಿಗೆ ಶಿಕ್ಷಣ ಇಲಾಖೆಯ ಪರವಾಗಿ ಅಭಿನಂದನೆ ಸಲ್ಲಿಸಿ ಕಾಲೇಜು ಶಿಕ್ಷಣಕ್ಕೆ ವ್ಯವಸ್ಥೆ ಮಾಡುವುದಾಗಿ ಧೈರ್ಯ ತುಂಬಿ ಬಂದಿದ್ದೇನೆ’ ಎಂದು ಉಲ್ಲೇಖಿಸಿದ್ದಾರೆ.

‘ಮಹೇಶನಿಗೆ ಪಿಯುಸಿ ತರಗತಿಗಳಲ್ಲಿ ವಿಜ್ಞಾನ ವಿಷಯಗಳನ್ನು ತೆಗೆದುಕೊಂಡು ಓದಬೇಕೆಂಬ ಮಹದಾಸೆಯಿದೆ. ಅವನ ಮನೆ, ಅವನ ಕುಟುಂಬ, ಅವರ ತಾಯಿಯ ಮುಗ್ಧತೆ, ಮಹೇಶನ ಸಾಧನೆ ಎಲ್ಲ ಕಂಡಾಗ ಕಣ್ತುಂಬಿ ಬಂತು - ಅದೇ ರೀತಿ ಹೃದಯ ತುಂಬಿ ಬಂತು’ ಎಂದೂ ಸಚಿವರು ಉಲ್ಲೇಖಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.