ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಮೇ 19ರಂದು ಮಲ್ಲೇಶ್ವರದಲ್ಲಿರುವ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಕಚೇರಿಯಲ್ಲಿ ಮಧ್ಯಾಹ್ನ 12.30ಕ್ಕೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಲಿದ್ದಾರೆ.
ಮಧ್ಯಾಹ್ನ 1 ಗಂಟೆ ನಂತರ ಇಲಾಖೆಯವೆಬ್‌ಸೈಟ್ https://karresults.nic.in/ನಲ್ಲಿ ಫಲಿತಾಂಶ ಪ್ರಕಟವಾಗಲಿದೆ.
ನಾಳೆ ಮಧ್ಯಾಹ್ನ ಆಯಾ ಶಾಲೆಗಳಲ್ಲೂ ಫಲಿತಾಂಶ ಪ್ರಕಟಿಸಲಾಗುತ್ತದೆ.ವಿದ್ಯಾರ್ಥಿಗಳುನೋಂದಾಯಿಸಿಕೊಂಡಿರುವ ಫೋನ್ ನಂಬರ್‌ಗಳಿಗೆ ಎಸ್‌ಎಂಎಸ್ ಮೂಲಕ ಫಲಿತಾಂಶ ಕಳುಹಿಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.