ADVERTISEMENT

ಎಸ್‌ಎಸ್‌ಎಲ್‌ಸಿ ಫಲಿತಾಂಶ ಇಂದು

​ಪ್ರಜಾವಾಣಿ ವಾರ್ತೆ
Published 7 ಮೇ 2023, 19:35 IST
Last Updated 7 ಮೇ 2023, 19:35 IST
ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಫಲಿತಾಂಶ ವೀಕ್ಷಣೆ ಮಾಡುತ್ತಿರುವ ದೃಶ್ಯ (ಸಾಂದರ್ಭಿಕ ಚಿತ್ರ)
ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಫಲಿತಾಂಶ ವೀಕ್ಷಣೆ ಮಾಡುತ್ತಿರುವ ದೃಶ್ಯ (ಸಾಂದರ್ಭಿಕ ಚಿತ್ರ)   

ಬೆಂಗಳೂರು: 2022–23ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಮೇ 8ರಂದು ಬೆಳಿಗ್ಗೆ 10ರ ವೇಳೆಗೆ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯನಿರ್ಣಯ ಮಂಡಳಿ ತಿಳಿಸಿದೆ.

ಬೆಳಿಗ್ಗೆ 11ರ ಬಳಿಕ http://karresults.nic.in ಜಾಲತಾಣದಲ್ಲೂ ವಿದ್ಯಾರ್ಥಿಗಳು ಫಲಿತಾಂಶ ವೀಕ್ಷಿಸಬಹುದು. ಮಧ್ಯಾಹ್ನ ಆಯಾ ಶಾಲೆಗಳಲ್ಲೂ ಪ್ರಕಟಿಸಲಾಗುವುದು. ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದ ಮೊಬೈಲ್‌ ಸಂಖ್ಯೆಗೆ ಎಸ್‌ಎಂಎಸ್‌ ಮೂಲಕವೂ ಫಲಿತಾಂಶದ ವಿವರ ಕಳುಹಿಸಲಾಗುವುದು ಎಂದು ಮಂಡಳಿ ತಿಳಿಸಿದೆ

ಮಾರ್ಚ್‌ 31ರಿಂದ ಏಪ್ರಿಲ್‌ 15ರ ವರೆಗೆ ರಾಜ್ಯದ 3,305 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆದಿದ್ದವು. 8.42 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದರು. ಜಿಲ್ಲಾ ಕೇಂದ್ರಗಳಲ್ಲೂ ಮೌಲ್ಯಮಾಪನ ಕಾರ್ಯ ನಡೆದಿದ್ದು, 63 ಸಾವಿರ ಶಿಕ್ಷಕರು ಭಾಗವಹಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.