2021–22ನೇ ಶೈಕ್ಷಣಿಕ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಗುರುವಾರ ಮಧ್ಯಾಹ್ನ 12.30ಕ್ಕೆ ಪ್ರಕಟವಾಗಲಿದೆ.
ವಿದ್ಯಾರ್ಥಿಗಳು ಫಲಿತಾಂಶವನ್ನು ಈ ವೆಬ್ ಸೈಟ್ಗಳ ಮೂಲಕ ನೋಡಬಹುದು.
https://karresults.nic.in/ಮತ್ತುwww.kseeb.kar.nic.in
ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಫೋನ್ ನಂಬರ್ಗಳಿಗೆ ಎಸ್ಎಂಎಸ್ ಮೂಲಕವೂ ಫಲಿತಾಂಶ ಕಳುಹಿಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.
ಈ ವರ್ಷ ಮಾರ್ಚ್ 28 ರಿಂದ ಏಪ್ರಿಲ್ 11ರವರೆಗೆ ನಡೆದ ಪರೀಕ್ಷೆಗೆ ರಾಜ್ಯದಾದ್ಯಂತ 8.73 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು.
Koo Appರಾಜ್ಯದಲ್ಲಿ ಈ ಬಾರಿ SSLC ಪರೀಕ್ಷೆ ಬರೆದಿರುವ 8,53,436 ವಿದ್ಯಾರ್ಥಿಗಳ ಪೈಕಿ 7,30,881 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಅನುತ್ತೀರ್ಣರಾದವರಿಗೆ ಜೂನ್ 27, 2022ರಂದು ಪೂರಕ ಪರೀಕ್ಷೆ ನಡೆಸಲಾಗುವುದು. ಕಲಿಕೆಯಲ್ಲಿ ಹಿಂದಿರುವವರಿಗೆ ಧೈರ್ಯ-ಸ್ಥೈರ್ಯ ತುಂಬುವ ಜತೆ ಉತ್ತೀರ್ಣರಾದವರ ಮುಂದಿನ ಆಯ್ಕೆಗಾಗಿ ಸರಿಯಾದ ಮಾರ್ಗದರ್ಶನ ನೀಡೋಣ. @BJP4Karnataka @CMOKarnataka @bcnagesh- Dr. Ashwathnarayan C. N. | ಡಾ. ಅಶ್ವಥ್ ನಾರಾಯಣ್ ಸಿ.ಎನ್. (@drashwathnarayan) 19 May 2022
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.