ಬೆಂಗಳೂರು: ಗಾಂಧಿ ಜಯಂತಿಯೊಳಗೆ ನಾಡಗೀತೆಯ ಸ್ವರ ಸಂಯೋಜನೆ ಹಾಗೂ ದಾಟಿ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನೀಲ್ ಕುಮಾರ್ ತಿಳಿಸಿದರು.
ವಿಧಾನಸಭೆಯಲ್ಲಿ ಮಂಗಳವಾರ ಶೂನ್ಯ ವೇಳೆಯಲ್ಲಿ ಬಿಜೆಪಿಯ ಎಂ.ಪಿ.ಕುಮಾರಸ್ವಾಮಿ ಪ್ರಶ್ನೆಗೆ ಉತ್ತರಿಸಿ, ‘ಈ ಬಗ್ಗೆ ವರದಿ ನೀಡಲು ಮೈಸೂರು ಲೀಲಾವತಿ ಹಾಗೂ ದೊಡ್ಡರಂಗೇಗೌಡರ ನೇತೃತ್ವದಲ್ಲಿ 9 ತಜ್ಞರ ಸಮಿತಿಯನ್ನು ಸೆಪ್ಟೆಂಬರ್ 9ರಂದು ರಚಿಸಿ 15 ದಿನಗಳಲ್ಲಿ ವರದಿ ನೀಡಲು ಸೂಚಿಸಲಾಗಿದೆ. ಸಮಿತಿಯ ಮೊದಲ ಸಭೆ ಸೆಪ್ಟೆಂಬರ್ 16ರಂದು ನಡೆದಿದೆ. ಸಮಿತಿ ಕೆಲವೇ ದಿನಗಳಲ್ಲಿ ವರದಿ ನೀಡಲಿದೆ’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.