
ಪ್ರಜಾವಾಣಿ ವಾರ್ತೆ
ಕರ್ನಾಟಕ ರಾಜ್ಯ ವಕೀಲರ ಪರಿಷತ್
ಬೆಂಗಳೂರು: ಕರ್ನಾಟಕ ರಾಜ್ಯ ವಕೀಲರ ಪರಿಷತ್‌ನ 23 ನೂತನ ಪದಾಧಿಕಾರಿಗಳ ಆಯ್ಕೆಗೆ ಮಾರ್ಚ್ 11ರಂದು ಚುನಾವಣೆ ಘೋಷಿಸಲಾಗಿದೆ. ಚುನಾವಣಾ ಅಧಿಕಾರಿಯಾಗಿರುವ ನಿವೃತ್ತ ನ್ಯಾಯಮೂರ್ತಿ ಸುಭಾಷ್ ಬಿ.ಅಡಿ ಅವರು ಈ ಕುರಿತಂತೆ ಇದೇ 5ರಂದು ಅಧಿಸೂಚನೆ ಹೊರಡಿಸಿದ್ದಾರೆ.
ಮಾರ್ಚ್ 11ರ ಬುಧವಾರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ರಾಜ್ಯದ 194 ಕಡೆ ಹಾಗೂ ಬೆಂಗಳೂರಿನಲ್ಲಿ ಸಿಟಿ ಸಿವಿಲ್ ಕೋರ್ಟ್ ಸಂಕೀರ್ಣದಲ್ಲಿ ಮತದಾನ ಜರುಗಲಿದೆ.
ವಕೀಲರ ವರ್ಗದಲ್ಲಿನ 18 ಮತ್ತು ಮಹಿಳೆಯರ ಕೋಟಾದಡಿಯ 7 ಸೀಟುಗಳೂ ಸೇರಿದಂತೆ ಒಟ್ಟು 25 ಜನ ಸದಸ್ಯರನ್ನು ಕೆಎಸ್‌ಬಿಸಿ ಹೊಂದಿದೆ. ಇವರಲ್ಲಿ ಇಬ್ಬರನ್ನು ಭಾರತೀಯ ವಕೀಲರ ಪರಿಷತ್ (ಬಿಸಿಐ) ಮುಖಾಂತರ ನಾಮನಿರ್ದೇಶನ ಮಾಡಲಾಗುತ್ತದೆ. ನಾಮಪತ್ರ ಸಲ್ಲಿಕೆಗೆ ಫೆಬ್ರುವರಿ 10 ಕಡೆಯ ದಿನ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.