ಬೆಂಗಳೂರು: ರಾಜ್ಯದಲ್ಲಿ ಭಾನುವಾರ ಒಟ್ಟು 8,425 ಕೋವಿಡ್ ಪ್ರಕರಣಗಳು ವರದಿಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವರದಿ ಹೇಳಿದೆ.
ರಾಜ್ಯದಲ್ಲಿ 97,781 ಸಕ್ರಿಯ ಪ್ರಕರಣಗಳು ಇದ್ದು, ಭಾನುವಾರ 47 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ.
ಇದರೊಂದಿಗೆ ರಾಜ್ಯದಲ್ಲಿ ಕೋವಿಡ್‌ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 39,347ಕ್ಕೆ ಏರಿಕೆಯಾಗಿದೆ.
ಭಾನುವಾರ 19,800 ಮಂದಿ ಕೋವಿಡ್‌ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.
ಬೆಂಗಳೂರು ನಗರದಲ್ಲಿ ಭಾನುವಾರ 3,822 ಮಂದಿಯಲ್ಲಿ ಕೋವಿಡ್ ಪ್ರಕರಣಗಳು ಕಂಡುಬಂದಿದ್ದು, 17 ಮಂದಿ ಮೃತಪಟ್ಟಿದ್ದಾರೆ. ಇದೇ ಸಂದರ್ಭದಲ್ಲಿ 9,893 ಮಂದಿ ಕೋವಿಡ್‌ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ತೆರಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.