ADVERTISEMENT

ಕೋವಿಡ್ | ಸೋಂಕಿತರಿಗಿಂತ ಗುಣಮುಖರೇ ಹೆಚ್ಚು; 4,776 ಮಂದಿ ಆಸ್ಪತ್ರೆಯಿಂದ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2020, 23:38 IST
Last Updated 3 ಆಗಸ್ಟ್ 2020, 23:38 IST
ಕೊರೊನಾ ವೈರಸ್ ಸೋಂಕು ಪರೀಕ್ಷೆ– ಸಂಗ್ರಹ ಚಿತ್ರ
ಕೊರೊನಾ ವೈರಸ್ ಸೋಂಕು ಪರೀಕ್ಷೆ– ಸಂಗ್ರಹ ಚಿತ್ರ   
""

ಬೆಂಗಳೂರು: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ದಿನವೊಂದರಲ್ಲಿ ಕೊರೊನಾ ಸೋಂಕು ದೃಢಪಟ್ಟವರಿಗಿಂತ, ಗುಣಮುಖರಾದವರ ಸಂಖ್ಯೆಯೇ ಹೆಚ್ಚಾಗಿದೆ. ಸೋಮವಾರ 4,752 ಜನರಲ್ಲಿ ಸೋಂಕು ದೃಢಪಟ್ಟಿದ್ದರೆ, 4,776 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ಬೆಂಗಳೂರು ನಗರದಲ್ಲಿಯೂ ಸೋಂಕಿತರಿಗಿಂತ, ಆಸ್ಪತ್ರೆಯಿಂದ ಗುಣಮುಖರಾದವರ ಸಂಖ್ಯೆಯೇ ಸಾವಿರಕ್ಕೂ ಅಧಿಕವಾಗಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,39,591ಕ್ಕೆ ಏರಿಕೆಯಾಗಿದೆ. 98 ಮಂದಿ ಸಾವಿಗೀಡಾಗುವ ಮೂಲಕ ಮೃತರ ಸಂಖ್ಯೆ 2,595ಕ್ಕೆ ಮುಟ್ಟಿದೆ. 629 ಜನ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರು ನಗರ (27), ಮೈಸೂರು (13), ಬೆಳಗಾವಿಯಲ್ಲಿ (10) ಜುಲೈ 3ರಂದು ಮೃತಪಟ್ಟವರ ಸಂಖ್ಯೆ ಎರಡಂಕಿ ತಲುಪಿದೆ.

ADVERTISEMENT

ಶೇ 5.67ಕ್ಕೆ ಏರಿಕೆ: ‘ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಒಳಗಾಗಿ ಗುಣಮುಖರಾಗುವವರ ಪ್ರಮಾಣ ಒಂದು ವಾರದಲ್ಲಿ ಶೇ.5.67 ರಷ್ಟು ಏರಿಕೆಯಾಗಿದೆ’ ಎಂದು ವೈದ್ಯಕೀಯ ಶಿಕ್ಷಣ ‌ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

‘ಬೆಂಗಳೂರು ನಗರದಲ್ಲಿ ಈ ಪ್ರಮಾಣ ಶೇ 9.17 ರಷ್ಟು ಏರಿಕೆ ಕಂಡಿದೆ. ಭಾನುವಾರ ಸಂಜೆಯ ವೇಳೆಗೆ ರಾಜ್ಯದ ಚೇತರಿಕೆ ಪ್ರಮಾಣ ಶೇ.42.81 ಮತ್ತು ಬೆಂಗಳೂರಿನಲ್ಲಿ ಶೇ 35.14 ರಷ್ಟು ಇತ್ತು’ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.