ADVERTISEMENT

ವಿಧಾನ ಪರಿಷತ್‌ ಚುನಾವಣೆ: ಕಾಂಗ್ರೆಸ್‌ನಿಂದ ಹರಿಪ್ರಸಾದ್, ನಜೀರ್‌ ಅಹಮದ್‌ ಕಣಕ್ಕೆ

​ಪ್ರಜಾವಾಣಿ ವಾರ್ತೆ
Published 17 ಜೂನ್ 2020, 10:50 IST
Last Updated 17 ಜೂನ್ 2020, 10:50 IST
ಬಿ.ಕೆ. ಹರಿಪ್ರಸಾದ್
ಬಿ.ಕೆ. ಹರಿಪ್ರಸಾದ್   

ನವದೆಹಲಿ: ರಾಜ್ಯ ವಿಧಾನ ಪರಿಷತ್‌ಗೆ ವಿಧಾನಸಭೆಯಿಂದ ಇದೇ 29ರಂದು ನಡೆಯಲಿರುವ ದ್ವೈವಾರ್ಷಿಕ ಚುನಾವಣೆಗೆ ಕಾಂಗ್ರೆಸ್‌ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ.

ನಾಲ್ಕು ಬಾರಿ ರಾಜ್ಯಸಭೆ ಸದಸ್ಯರಾಗಿ ಸೇವೆ ಸಲ್ಲಿಸಿರುವ ಪಕ್ಷದ ಹಿರಿಯ ಸದಸ್ಯ ಬಿ.ಕೆ. ಹರಿಪ್ರಸಾದ್ ಹಾಗೂ ಪರಿಷತ್‌ನ ಹಾಲಿ ಸದಸ್ಯ ನಜೀರ್‌ ಅಹಮ್ಮದ್ ಅವರನ್ನು ಕಣಕ್ಕಿಳಿಸಲು ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ನಿರ್ಧರಿಸಿದ್ದಾಗಿ ಪ್ರಧಾನ ಕಾರ್ಯದರ್ಶಿ ಮುಕುಲ್ ವಾಸ್ನಿಕ್ ತಿಳಿಸಿದ್ದಾರೆ.

ಇದೇ 30ರಂದು ಖಾಲಿ ಆಗಲಿರುವ ವಿಧಾನ ಪರಿಷತ್‌ನ 7 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಕಣಕ್ಕಿಳಿಯಲಿರುವ ಬಿಜೆಪಿಯ ಅಭ್ಯರ್ಥಿಗಳ ಘೋಷಣೆ ಆಗಬೇಕಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.