ADVERTISEMENT

ವಿಶ್ವವಿದ್ಯಾಲಯಗಳ ಕಾಯ್ದೆ ತಿದ್ದುಪಡಿಗೆ ಸಮಿತಿ

​ಪ್ರಜಾವಾಣಿ ವಾರ್ತೆ
Published 8 ನವೆಂಬರ್ 2023, 16:28 IST
Last Updated 8 ನವೆಂಬರ್ 2023, 16:28 IST

ಬೆಂಗಳೂರು: ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಕಾಯ್ದೆಗೆ (2000) ತಿದ್ದುಪಡಿ ತರುವ ಕುರಿತು ಪರಿಶೀಲಿಸಲು ನಿವೃತ್ತ ಐಎಎಸ್‌ ಅಧಿಕಾರಿ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗುತ್ತಿದೆ.

ವಿಶ್ರಾಂತ ಕುಲಪತಿಗಳು, ನಿವೃತ್ತ ಕುಲಸಚಿವರು, ಅಧ್ಯಾಪಕರನ್ನು ಒಳಗೊಂಡ ತಜ್ಞರ ಸಮಿತಿ ರಚಿಸಬೇಕು. ಈ ಸಮಿತಿ ಕಾಯ್ದೆಯಲ್ಲಿನ ನ್ಯೂನತೆಗಳನ್ನು ಪರಿಶೀಲಿಸಿ, ತಿದ್ದಪಡಿ ಮಾಡಬೇಕಿರುವ ಅಂಶಗಳ ಕುರಿತು ಒಂದು ತಿಂಗಳ ಒಳಗಾಗಿ ವರದಿ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅವರು ಉನ್ನತ ಶಿಕ್ಷಣ ಇಲಾಖೆ ಹೆಚ್ಚುವರಿ ಕಾರ್ಯದರ್ಶಿಗೆ ಸೂಚಿಸಿದ್ದಾರೆ.

ವಿಶ್ವವಿದ್ಯಾಲಯಗಳಲ್ಲಿ ಉನ್ನತ ಗುಣಮಟ್ಟದ ಸುಧಾರಣೆ, ಶಿಕ್ಷಣದ ಶ್ರೇಷ್ಠತೆಯ ಸಾಧನೆಗಾಗಿ ಬೋಧನೆ, ಕಲಿಕೆ, ಸಂಶೋಧನಾ ಕ್ಷೇತ್ರಗಳಲ್ಲಿ ಸುಧಾರಣೆ ತರಲು, ಶೈಕ್ಷಣಿಕ ಸ್ವಾತಂತ್ರ್ಯ ಮತ್ತು ಸ್ವಾಯತ್ತತೆ ದೊರಕಿಸಲು, ಆಡಳಿತದಲ್ಲಿ ಸುಧಾರಣೆ ತರಲು 2020ರಲ್ಲಿ ಕಾಯ್ದೆ ರೂಪಿಸಲಾಗಿತ್ತು. ಈ ಕಾಯ್ದೆ ಹಲವು ನ್ಯೂನತೆಗಳಿಂದ ಕೂಡಿದೆ ಎಂಬ ಬಗ್ಗೆ ಹಲವು ದೂರುಗಳು ಸಲ್ಲಿಕೆಯಾಗಿರುವ ಕಾರಣ ತಿದ್ದುಪಡಿ ಮಾಡಲಾಗುತ್ತಿದೆ ಎಂದು ವಿವರಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.