ಶೇಂಗಾ
ಬೆಂಗಳೂರು: ಬೆಂಬಲ ಬೆಲೆಯಡಿ ಶೇಂಗಾ ಖರೀದಿ ನೋಂದಣಿ ಮತ್ತು ಖರೀದಿ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.
ನೋಂದಣಿ ಅವಧಿಯನ್ನು ಜನವರಿ 20ರ ವರೆಗೆ ಹಾಗೂ ಖರೀದಿ ಅವಧಿಯನ್ನು ಜನವರಿ 22ರವರೆಗೆ ವಿಸ್ತರಣೆ ಮಾಡಲಾಗಿದೆ. ಶೇಂಗಾ ಬೆಲೆಯನ್ನು ಪ್ರತಿ ಕ್ವಿಂಟಾಲ್‌ಗೆ 6783 ರೂ. ನಿಗದಿಪಡಿಸಲಾಗಿದೆ. ಖರೀದಿ ಅವಧಿ ವಿಸ್ತರಣೆ ಬೇಡಿಕೆ ಬಂದ ಹಿನ್ನೆಲೆಯಲ್ಲಿ ಜನವರಿ 22ರ ವರೆಗೆ ವಿಸ್ತರಣೆ ಮಾಡಲಾಗಿದೆ.
ಕೊಪ್ಪಳ, ಧಾರವಾಡ, ಹಾವೇರಿ, ಬಳ್ಳಾರಿ, ಚಿತ್ರದುರ್ಗ, ಗದಗ, ಬಾಗಲಕೋಟೆ, ದಾವಣಗೆರೆ, ರಾಯಚೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಖರೀದಿ ಕೇಂದ್ರಗಳನ್ನು ಆರಂಭಿಸಲಾಗಿದೆ ಎಂದು ಸಚಿವ ಶಿವಾನಂದ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.