ADVERTISEMENT

ಬೇಡಿಕೆಗಳ ಈಡೇರಿಕೆಗಾಗಿ ಶಿಕ್ಷಕರ ರ‍್ಯಾಲಿ

​ಪ್ರಜಾವಾಣಿ ವಾರ್ತೆ
Published 11 ಫೆಬ್ರುವರಿ 2019, 18:14 IST
Last Updated 11 ಫೆಬ್ರುವರಿ 2019, 18:14 IST

ಬೆಂಗಳೂರು: ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಇದೇ 16ರಂದುವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿಯೂ ಪ್ರತಿಭಟನಾ ರ‍್ಯಾಲಿ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ.

ನಗರದಲ್ಲಿ ಸೋಮವಾರ ನಡೆದ ಸಂಘದ ಕಾರ್ಯಕಾರಿ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಯಿತು. ಮಾರ್ಚ್‌ ಮುಗಿಯುವುದರೊಳಗೆ ಸರ್ಕಾರ ಸ್ಪಂದಿಸದಿದ್ದರೆ, ವಿಧಾನಸೌಧ ಚಲೋ ಹಮ್ಮಿಕೊಳ್ಳುವ ಕುರಿತು ಸಹ ಸಭೆಯಲ್ಲಿಚರ್ಚಿಸಲಾಯಿತು.

3 ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಶಿಕ್ಷಕರ ವರ್ಗಾವಣೆಯನ್ನು ತಕ್ಷಣ ಪ್ರಾರಂಭಿಸಬೇಕು. ಪದವೀಧರ ಶಿಕ್ಷಕರಿಗೆ ಪರೀಕ್ಷೆಯನ್ನು ಕೈಬಿಟ್ಟು ಬಡ್ತಿ ನೀಡಬೇಕು. ನೂತನ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಬೇಕು. ಶಿಕ್ಷಣೇತರ ಕಾರ್ಯಗಳಿಂದ ಮುಕ್ತಗೊಳಿಸಬೇಕು ಮತ್ತು ಗ್ರಾಮೀಣ ಕೃಪಾಂಕ ಶಿಕ್ಷಕರಿಗೆ ಸೇವಾ ಸೌಲಭ್ಯ ದೊರಕಿಸಿಕೊಡಬೇಕು ಎನ್ನುವುದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಪ್ರಮುಖ ಬೇಡಿಕೆಗಳಾಗಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.